News Karnataka Kannada
Saturday, May 04 2024
ಹಾಸನ

ಹಾಸನ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಅ.28 ರಂದು ಕೋಟಿ ಕಂಠ ಗಾಯನ ಕಾರ್ಯಕ್ರಮ

As a member of The Kannada Sahitya Parishat
Photo Credit : Pixabay

ಹಾಸನ: ೬೭ನೇ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ, ಉತ್ಸಾಹದಿಂದ ನಾಡಿನಾದ್ಯಂತ ಆಚರಿಸುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೋಟಿ ಕಂಠ ಗಾಯನವನ್ನು ಅ.28ರ ಶುಕ್ರವಾರ ಬೆಳಗ್ಗೆ ೧೧ಗಂಟೆಗೆ ನಾಡಿನಾದ್ಯಂತ ಆಯೋಜಿಸಲಾಗಿದೆ.

ನಾಡು-ನುಡಿಯ ಬಗ್ಗೆ ಅಭಿಮಾನ ಮೂಡಿಸುವ, ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಗೀತೆ, ಕವನಗಳನ್ನು ನಾಡಿನ ಹೆಮ್ಮೆಯ ಕವಿಗಳು ರಚಿಸಿದ್ದು, ಇವುಗಳ ಕೇಳುವಿಕೆಯು ನಮ್ಮಲ್ಲಿ ಅಭಿಮಾನವನ್ನು ಮೂಡಿಸುತ್ತದೆ.  ಕಳೆದ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಾತಿನಿಧಿಕವಾಗಿ ಆಯ್ದ ೩ ಕನ್ನಡ ಗೀತಗಳ ಸಮೂಹ ಗಾಯನವನ್ನು ವಿನೂತನವಾಗಿ ಲಕ್ಷ ಕಂಠ ಗೀತ ಗಾಯನ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ಆಯೋಜಿಸಿ ಯಶಸ್ವಿಗೊಂಡ ನಿಟ್ಟಿನಲ್ಲಿ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.

ನನ್ನ ಹಾಡು – ನನ್ನ ನಾಡು ಎಂಬ ಶೀರ್ಷಿಕೆಯಡಿ ನಾಡಗೀತೆ ಶ್ರೀ ಕುವೆಂಪು ವಿರಚಿತ ಜಯಭಾರತ ಜನನಿಯ ತನುಜಾತೆ ಸೇರಿ ಒಟ್ಟು ಆರು ಆಯ್ದ ಕನ್ನಡ ಗೀತೆಗಳನ್ನು ಒಂದು ಕೋಟಿಗೂ ಹೆಚ್ಚು ಜನ ಏಕಕಾಲದಲ್ಲಿ ಏಕಕಂಠದಲ್ಲಿ ಹಾಡಲು ಯೋಜಿಸಲಾಗಿದೆ.

ಕೋಟಿ ಕಂಠ ಗೀತ ಗಾಯನಕ್ಕೆ ನೋಂದಣಿ:

ಕಾರ್ಯಕ್ರಮದಲ್ಲಿ ಭಾಗವಹಿಸುವವರನ್ನು ನೋಂದಾಯಿಸಲು, ಭಾಗವಹಿಸಿದವರಿಗೆ ಸ್ವಯಂಚಾಲಿತ ಆನ್‌ಲೈನ್ ಪ್ರಮಾಣಪತ್ರ ನೀಡಲು ಉದ್ದೇಶಿಸಿದ್ದು, ಅದರ ಅಂಗವಾಗಿ ಅ.೨೮ರವರೆಗೆ ನೋಂದಣಿ ಅಭಿಯಾನ ಮಾಡಲು ಯೋಜಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು