Categories: ಹಾಸನ

ಹಾಸನ: ಅಕ್ರಮ ಗೋ ಮಾಂಸ ಮಾರಾಟ, ಪ್ರಕರಣ ದಾಖಲು

ಹಾಸನ: ಯಾವ ಪರವಾನಿಗೆ ಪಡೆಯದೇ ಅಕ್ರಮವಾಗಿ ದನದ ಮಾಂಸವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಗೋ ಮಾಂಸವನ್ನು ವಶಪಡಿಸಿಕೊಂಡು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿದ ಘಟನೆ ಭಾನುವಾರ ನಡೆದಿದೆ.

ಸಂತೇಪೇಟೆ ಸರ್ಕಲ್‌ನಲ್ಲಿ, ಟೌನ್ ರೌಂಡ್ ನಲಿರುವಾಗ ಬಂದ ಮಾಹಿತಿ ಆದಾರಿಸಿ ನಗರ ಪೊಲೀಸ್ ಠಾಣೆ ಪಿಐ ರೇವಣ್ಣ ನೇತೃತ್ವದ ಪೊಲೀಸ್ ಸಿಬ್ಬಂದಿಯವರು ಸ್ಥಳಕ್ಕೆ ಹೋದಾಗ ನಗರದ ಚಿಪ್ಪಿನಕಟ್ಟೆ ವಾಸಿ ಸಮಿಹುಲಾ ಮತ್ತು ಪೆನ್‌ಷನ್ ಮೊಹಲಾ, ವಾಸಿ ಜಾಫರ್ ಷರೀಪ್ ರವರು ಶ್ರೀನಗರದ ತಮ್ಮ ಶೆಡ್ಡಿನಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ದನದ ಮಾಂಸ, ದನದ ತಲೆಯ ಕೊಂಬು ಮತ್ತು ಮೂಳೆಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದು ತಿಳಿದು ಬಂದಿತು. ಈ ವೇಳೆ ಕೆಲ ಸಮಯ ವಿಚಾರಣೆ ನಡೆಸಿ ಅವರ ವಿರುದ್ಧ ಪ್ರಕರಣ ದಾಖಲಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಆರೋಗ್ಯ ನಿರೀಕ್ಷಕರಾದ ಮಂಜುನಾಥ್, ಪ್ರಸಾದ್ ಸ್ಥಳದಲ್ಲಿದ್ದು, ಗೋವು ಮಾಂಸ ಮಾರಾಟ ಮಾಡದಂತೆ ನಿಷೇಧ ಇದ್ದರೂ ಕೂಡ ಯಾವ ಪರವಾನಿಗೆ ಇಲ್ಲದೇ ಮಾರಾಟ ಮಾಡುತ್ತಿರುವುದು ಅಪರಾಧ ಎಂದು ಪರಿಗಣಿಸಿ ಅವರ ವಿರುದ್ಧ ಕ್ರಮಕೈಗೊಂಡಿರುವುದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಯ ಮಾತುಗಳು ಕೇಳಿ ಬಂದಿದೆ.

Ashika S

Recent Posts

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

11 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

19 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

23 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

34 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

37 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

38 mins ago