News Karnataka Kannada
Sunday, May 05 2024
ಹಾಸನ

ಹಾಸನ: ಎಎಸ್ಪಿ, ಡಿವೈಎಸ್‌ಪಿ ನೇತೃತ್ವದಲ್ಲಿ ೧೦೦ ಕ್ಕೂ ಹೆಚ್ಚು ಪೊಲೀಸರಿಂದ ಮಿಂಚಿನ ಕಾರ್ಯಾಚರಣೆ

Hassan: Over 100 police personnel led by ASP, DySP conduct lightning operation
Photo Credit : News Kannada

ಹಾಸನ: ಜಿಲ್ಲಾ ಕಾರಾಗೃಹದ ಮೇಲೆ ಎಎಸ್ಪಿ ಹಾಗೂ ಡಿವೈ ಎಸ್ಪಿ ನೇತೃತ್ವದಲ್ಲಿ ಪೊಲೀಸರು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿ ಜೈಲಿನೊಳಗೆ ಬಳಸಲಾಗುತ್ತಿದ್ದ ಗಾಂಜಾ, ಎರಡು ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದರು.

ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ಕಾರಾಗೃಹದಲ್ಲಿ ಮೊಬೈಲ್ ಬಳಕೆ ಹಾಗೂ ಗಾಂಜಾ ಬಳಕೆ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ದಾಳಿ ಮಾಡಲಾಗಿದ್ದು ಇದರಲ್ಲಿ ನಾಲ್ವರು ವಿಚಾರಣಾಧೀನ ಕೈದಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ತಮ್ಮಯ್ಯ ಅವರ ನೇತೃತ್ವದಲ್ಲಿ ಡಿವೈಎಸ್ಪಿ ಉದಯ್ ಬಸ್ಕರ್ ಅವರೊಂದಿಗೆ ೧೪ ಮಂದಿ ಪೊಲೀಸ್ ಇನ್ಸ್ಪೆಕ್ಟರ್ ನೂರು ಮಂದಿ ಪೊಲೀಸರ ಜೊತೆ ಏಕ ಕಾಲದಲ್ಲಿ ದಾಳಿ ನಡೆಸಿ, ಕಾರಾ ಗೃಹದ ೬ ಸೆಲ್‌ಗಳನ್ನು ಪರಿಶೀಲಿಸಿದಾಗ ಎರಡು ಮೊಬೈಲ್, ಎರಡು ಇಯರ್ ಪೋನ್, ೫ ಪ್ಯಾಕೆಟ್ ಗಾಂಜಾ ವನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಕೊಲೆ ಪ್ರಕರಣದಲ್ಲಿ ಈಗಾಗಲೇ ಆರೋಪಿಗಳಾಗಿ ಶಿಕ್ಷೆ ಅನುಭವಿಸುತ್ತಿರುವ ಗಾಂಜಾ ಬಳುಸುತ್ತಿದ್ದ ಆರೋಪದಡಿ ಮಣಿಕಂಠ, ನವೀನ್ ಕುಮಾರ್ ಹಾಗೂ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಅಬ್ದುಲ್ ಕರೀಂ ಮತ್ತು ಗುರುಮೂರ್ತಿ ಇವರು ಗಳನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸುವುದು ದೃಢ ಪಟ್ಟಿದ್ದು ಇವರನ್ನು ಪುನಃ ಪೊಲೀಸ್ ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದರು.

ಈಗಾಗಲೇ ಶ್ರೀನಗರ ಸುತ್ತಮುತ್ತ ಗಾಂಜಾ ಸೇವನೆ ಮತ್ತು ಮಾರಾಟದ ಬಗ್ಗೆ ಸಾಕಷ್ಟು ದೂರು ಗಳು ಕೇಳಿ ಬಂದಿದ್ದು ಬಂಧಿ ಕಾನೆಯ ಸುತ್ತ ಮುತ್ತ ಗಾಂಜಾ ,ಮೊಬೈಲ್ ಸರಬರಾಜಿನ ಬಗ್ಗೆ ಮಾಹಿತಿ ಇದ್ದು ಆ ನಿಟ್ಟಿನಲ್ಲಿ.ಕೂಡ ತನಿಖೆ ನಡೆಸಲಾಗುತ್ತಿದೆ ಎಂದರು

ಬಂದಿಕಾನೆಯಲ್ಲಿ ಸಾಕಷ್ಟು ಬದ್ರತೆ ಇದ್ದರು ಕೂಡ ಗಾಂಜಾ ಮತ್ತು ಮೊಬೈಲ್‌ಗಳು ಬಳಕೆಯಾಗುತ್ತಿರುವ ಬಗ್ಗೆ ಯಾವ ಮೂಲಗಳಿಂದ ಸರಬರಾಜು ಆಗುತ್ತಿದೆ, ಇದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಇತರರು ಶಾಮೀಲಾಗಿದ್ದಾರೆಯೆ ಎಂಬ ಬಗ್ಗೆ ಕಟ್ಟುನಿಟ್ಟಾಗಿ ತನಿಖೆ ನಡೆಯುತ್ತಿದ್ದು ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿಗಳಿಂದ ಕೋಪ ಆಗಿದ್ದಾರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳ ಲಾಗುವುದು ಎಂದು ಭರವಸೆ ನೀಡಿದರು.

ಸಿಸಿ ಕ್ಯಾಮೆರಾ ಅಳವಡಿಸಿಲ್ಲ ಏಕೆ….!!
ಬಂಧಿಕಾನೆಗಳಲ್ಲಿ ಅಕ್ರಮವಾಗಿ ಮೊಬೈಲ್ ಬಳಕೆ ಹಾಗೂ ಗಾಂಜಾ ಬಳಕೆ ಸಂಬಂಧಪಟ್ಟಂತೆ ಈ ಹಿಂದೆಯೂ ಸಹ ದಾಳಿ ನಡೆಸಿದಾಗ ಪ್ರಕರಣ ಬಯಲಿಗೆ ಬಂದಿದೆ. ಕಾರಾಗೃಹದ ಹಿಂಭಾಗದ ಪ್ರದೇಶದಿಂದ ಮೊಬೈಲ್ ಹಾಗೂ ಗಾಂಜಾ ಸರಬರಾಜಾಗುತ್ತಿದೆ ಎಂಬ ದೂರುಗಳು ವ್ಯಾಪಕವಾಗಿ ಕೇಳುತ್ತಿದ್ದರು ಕಾರಾಗೃಹದ ಹಿಂಭಾಗ ಸಿ ಸಿ ಕ್ಯಾಮೆರಾ ಅಳವಡಿಕೆ ಮಾಡದಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಕೇವಲ ಕಾರಾಗೃಹದ ಒಳಗಿನ ದೇಶ್ಯಾವಳಿ ದಾಖಲು ಮಾಡಲು ಸಿಸಿ ಕ್ಯಾಮೆರಾ ಅಳವಡಿಸಿದ್ದು ಕಾರ್ಯಗೃಹದ ಹೊರಗಿನ ಪ್ರದೇಶಕ್ಕೆ ಸಿಸಿ ಕ್ಯಾಮೆರಾ ಅಳವಡಿಸಿಲ್ಲ ಏಕೆ ಎಂಬ ಕುರಿತು ಅನುಮಾನ ವ್ಯಕ್ತವಾಗುತ್ತಿದೆ.

ಇಬ್ಬರ ಗಡಿಪಾರು
ಗಾಂಜಾ ಸರಬರಾಜು ಆರೋಪದಡಿ ನಗರದ ಆದಿಲ್ ಹಾಗೂ ರಾಹಿಲ್ ಎಂಬುವರನ್ನು ಗಡಿಪಾರು ಮಾಡಲಾಗಿದೆ ಎಂದು ಎಸ್‌ಪಿ ತಿಳಿಸಿದರು. ಇಬ್ಬರು ಆರೋಪಿಗಳು ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಗಾಂಜಾ ಮಾರಾಟ ಮತ್ತು ಸರಬರಾಜು ಮಾಡಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು ಈ ಹಿನ್ನೆಲೆಯಲ್ಲಿ ಇಬ್ಬರನ್ನು ಗಡಿಪಾರು ಮಾಡಲಾಗಿದೆ ಎಂದು ತಿಳಿಸಿದರು. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಸಂಬಂಧ ಈಗಾಗಲೇ ಆರು ಮಂದಿಯನ್ನು ಗಡಿಪಾರು ಮಾಡಲಾಗಿದೆ ಎಂದು ತಿಳಿಸಿದ ಅವರು ಕಾರಾಗೃಹಗಳಲ್ಲಿ ಅಕ್ರಮಗಳು ನಡೆಯದಂತೆ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹಾಗೂ ಕಾಲಕಾಲಕ್ಕೆ ಪರಿಶೀಲನೆ ನಡೆಸುವಂತೆ ಎಡಿಜಿಪಿ ಅವರು ಸಹ ಸೂಚನೆಯನ್ನು ನೀಡಿದ್ದರು ಆ ಹಿನ್ನೆಲೆಯಲ್ಲಿ ಇಂದು ಕಾರ್ಯಚರಣೆ ನಡೆಸಲಾಯಿತು ಎಂದು ಎಸ್ ಪಿ ಮಾಹಿತಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು