Categories: ಹಾಸನ

ಹಾಸನ: ಪೊಲೀಸ್ ಪೇದೆ ಮೇಲೆ ಮಾರಣಾಂತಿಕ ಹಲ್ಲೆ

ಹಾಸನ: ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ಯಸಳೂರು ಪೊಲೀಸ್ ಠಾಣೆಯ ಶರತ್ ಹಲ್ಲೆಗೊಳಗಾದ ಕಾನ್ಸ್‌ಟೇಬಲ್.ಹೊಳೇನರಸೀಪುರ ತಾಲ್ಲೂಕಿನ, ಮಳಲಿ ದೇವಸ್ಥಾನದಲ್ಲಿ ಘಟನೆ ನಡೆದಿದೆ.

ಶರತ್ ಹೊಳೆನರಸೀಪುರ ತಾಲ್ಲೂಕಿನ, ಕುಂದೂರು ಹೋಬಳಿ ಎಸ್.ಹೊನ್ನೇನಹಳ್ಳಿ ಗ್ರಾಮದವರು. ಜೂ.೧೫ ರಂದು ಸಾಂದರ್ಭಿಕ ರಜೆ ಪಡೆದು ತಮ್ಮ ಗ್ರಾಮದ ದೀಪಕ್ ಎಂಬುವವರ ಮಗಳ ಹುಟ್ಟಹಬ್ಬದ ಕಾರ್ಯಕ್ರಮಕ್ಕೆ ಮಳಲಿ ದೇವಸ್ಥಾನಕ್ಕೆ ತೆರಳಿದ್ದರು. ದೇವಸ್ಥಾನದ ಬಳಿಯಿರುವ ಸೋನಾ ಶ್ರೇಯ ಕನ್ವೆನ್ಷನ್ ಹಾಲ್ ಮುಂಭಾಗ ಗ್ರಾಮದ ಯುವಕರ ಗುಂಪು ಚೇತನ್ ಎಂಬ ಯುವಕನಿಗೆ ಅವಾಚ್ಯ ಶಬ್ದಗಳಿಂದ ಬೈಯ್ದು ಹಲ್ಲೆ ಮಾಡುತ್ತಿದ್ದಾಗ ಈ ವೇಳೆ ಜಗಳ ಬಿಡಿಸಲು ಶರತ್ ಹೋಗಿದ್ದಾರೆ ಎನ್ನಲಾಗಿದೆ.

ಈ ವೇಳೆ ಶರತ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಿಥುನ್, ಲೋಹಿತ್, ನಟರಾಜು ಹಾಗೂ ಇತರರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕಲ್ಲಿನಿಂದ ಶರತ್ ತಲೆಗೆ ಹೊಡೆದು ಕಾರಿನಿಂದ ಲಾಂಗ್ ತಂದು ಅಟ್ಟಾಡಿಸಿದ್ದಾರೆ. ತಕ್ಷಣ ಶರತ್ ಕನ್ವೆನ್ಷನ್ ಹಾಲ್ ಒಳಗೆ ಓಡಿ ಹೋಗಿದ್ದಾರೆ. ನಂತರ ಕನ್ವೆನ್ಷನ್ ಹಾಲ್‌ಗೆ ನುಗ್ಗಿ ಲಾಂಗ್‌ನಿಂದ ಮನಬಂದಂತೆ ಶರತ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಾಲ್‌ನಲ್ಲೇ ಕಾನ್ಸ್‌ಟೇಬಲ್ ಶರತ್ ಕುಸಿದು ಬಿದಿದ್ದಾರೆ. ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹೊಳೇನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಪೊಲೀಸ್ ಪೇದೆ ಮೇಲೆ ಲಾಂಗ್‌ನಿಂದ ಹಲ್ಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago