ಹಾಸನ

ಹಾಸನ: ನಾಲೆಗೆ ನೀರು ಹರಿಸಲು ರೇವಣ್ಣ ಒತ್ತಾಯ

ಹಾಸನ: ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು ಹೇಮಾವತಿ ಜಲಾಶಯಕ್ಕೂ ಒಳಹರಿವು ಹೆಚ್ಚಳವಾಗಿದೆ. ಆದ್ದರಿಂದ ಕೃಷಿಗೆ ಪೂರಕವಾಗಿ ನಾಲೆಗಳಿಗೆ ನೀರು ಹರಿಸುವಂತೆ ಮಾಜಿ ಸಚಿವ ಎಚ್ ಡಿ ರೇವಣ್ಣ ಒತ್ತಾಯಿಸಿದರು.

ನಗರದ ಸಂಸದರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಲಾಶಯದಲ್ಲಿ ಪ್ರಸ್ತುತ ೨೨ ಟಿಎಂಸಿ ನೀರಿನ ಸಂಗ್ರಹವಿದ್ದು, ಉತ್ತಮ ಮಳೆಯಾಗುತ್ತಿ ರುವುದ ರಿಂದ ಹಳೆಯ ನಾಲೆಗಳ ಮೂಲಕ ಕೃಷಿಗೆ ಅನುಕೂಲವಾಗಲು ನೀರು ಹರಿಸುವಂತೆ ಒತ್ತಾಯಿಸಿದರು.

ಹಿಂದೆ ಎರಡು ಬೆಳೆಗೆ ಆಗುವಂತೆ ನೀರನ್ನು ಹರಿಸಲಾಗುತ್ತಿತ್ತು ಆದರೆ ಕೆಲ ದಿನಗಳ ಹಿಂದೆ ತುಮಕೂರಿಗೆ ನೀರು ಹರಿಸಲಾಗಿದೆ. ಇದಕ್ಕೆ ನಮ್ಮ ಯಾವುದೇ ಆಕ್ಷೇಪ ಇಲ್ಲ; ಆದರೆ ಜಿಲ್ಲೆಯ ರೈತರ ಅನುಕೂಲಕ್ಕೆ ನೀರು ಹರಿಸಿದರೆ ಉತ್ತಮ ಎಂದು ತಿಳಿಸಿದರು.

ಈ ಸಂಬಂಧ ಅಧಿವೇಶನದಲ್ಲಿಯೂ ಪ್ರಸ್ತಾಪ ಮಾಡಿದ್ದು, ರೈತರ ಕೃಷಿ ಚಟುವಟಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ಕರೆಯಬೇಕು ಮತ್ತು ನಾಲೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಲಾಗಿದೆ ಎಂದು ಹೇಳಿದರು.

ಕಲ್ಲು ಗಣಿಗಾರಿಕೆಗೆ ನೂರಾರು ಎಕರೆ: ಆಕ್ಷೇಪ
ಹಿಂದೆ ಇದ್ದ ಸಚಿವರು ಎಣ್ಣಿ ಭಾಗ್ಯ ಕರುಣಿಸಿದರು ಇದೀಗ ಜಿಲ್ಲೆಯಲ್ಲಿನ ಗುಡ್ಡಗಳನ್ನು ಕರಗಿಸಲು ಸರ್ಕಾರ ಹೊರಟಿದೆ. ಇದಕ್ಕಾಗಿ ಜಿಲ್ಲೆಯ ೨೧೦ ಮಂದಿಗೆ ೬೬೭ ಎಕರೆ ಪ್ರದೇಶ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡಲು ಕಡತಗಳು ಅಂತಿಮ ಹಂತದಲ್ಲಿ ಇದೆ. ಒಬ್ಬೊಬ್ಬರಿಂದ ೪ ರಿಂದ ೫ ಲಕ್ಷ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಿದರು .

ಜಿಲ್ಲೆಯ ಅಮೃತ ಮಹಲ್ ಕಾವಲು ಸೇರಿದಂತೆ ನೈಸರ್ಗಿಕ ಸಮತೋಲನಕ್ಕೆ ಅನುಕೂಲವಾಗು ವ ಗುಡ್ಡ ಬೆಟ್ಟಗಳನ್ನು ಗುರುತಿಸಲಾಗಿದ್ದು ಇಂತಹ ಸ್ಥಳಗಳಲ್ಲಿ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡಬಾರದು. ಈ ಕುರಿತು ಸಂಬಂಧಪಟ್ಟ ಸಚಿವರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿಗಳು ಸಹ ಈ ಸಂಬಂಧ ಅಗತ್ಯ ಕ್ರಮವನ್ನು ಕೈಗೊಳ್ಳಬೇಕು ೨೧೦ ಮಂದಿಗೆ ಬೇಕಾಬಿಟ್ಟಿಯಾಗಿ ಕಲ್ಲುಗುಣಿಗಾರಿಕೆ ನಡೆಸಲು ಅವಕಾಶ ನೀಡಬಾರದು. ಸರ್ಕಾರಕ್ಕೆ ಆದಾಯ ಬರಬೇ ಕಾಗಿದ್ದರೆ ಹರಾಜಿನ ಮೂಲಕ ಆಯ್ಕೆ ಮಾಡಿ ಗಣಿಗಾರಿಕೆಗೆ ಅವಕಾಶ ನೀಡಬೇಕು ಆದರೆ ಇತಿಹಾಸ ಹಿನ್ನೆಲೆವುಳ್ಳ ಗುಡ್ಡ ಬೆಟ್ಟಗಳನ್ನು ಖಾಲಿ ಮಾಡಬಾರದು ಎಂದು ರೇವಣ್ಣ ಆಗ್ರಹಿಸಿದರು.

ಸರ್ಕಾರದಿಂದ ಲೋಕೋಪಯೋಗಿ ಇಲಾಖೆಗೆ ೨೫೦ ಕೋಟಿ ರೂ ಬಾಕಿ ಇದ್ದು ಸಮಯಕ್ಕೆ ಸರಿಯಾಗಿ ಹಣ ಬಿಡುಗಡೆ ಮಾಡದೇ ಇರುವುದರಿಂದ ಗುತ್ತಿಗೆದಾರರು ವಿಷ ಕುಡಿಯುವ ಪರಿಸ್ಥಿತಿ ಇದೆ.

ಅಧಿವೇಶನದಲ್ಲೂ ಈ ಬಗ್ಗೆ ಪ್ರಸ್ತಾಪಿಸಲಾಗಿದ್ದು ಕೂಡಲೇ ಸರ್ಕಾರ ಹಣ ಬಿಡುಗಡೆ ಮಾಡಬೇಕು ಎಂದು ರೇವಣ್ಣ ಅವರು ಆಗ್ರಹಿಸಿದರು.

Sneha Gowda

Recent Posts

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

12 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

40 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

48 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

49 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

59 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

1 hour ago