Categories: ಹಾಸನ

ಹಾಸನ: ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗೆ ಶಾಸಕ ರೇವಣ್ಣ ತೊಡಕು

ಹಾಸನ: ಮಾರ್ಚ್ ೧ ರಂದು ಕಾಂಗ್ರೆಸ್ ನ ಪ್ರಜಾ ದ್ವನಿ ಯಾತ್ರೆ ಕಾರ್ಯಕ್ರಮ ನಡೆಸಲು ಹೊಳೆನರಸೀಪುರ ಪುರಸಭೆಯಿಂದ ನೀಡಲಾಗಿದ್ದ ಅನುಮತಿಯನ್ನು ರಾಜಕೀಯ ಪ್ರಭಾವ ಬಳಸಿ ಸ್ಥಳೀಯ ಶಾಸಕ ಎಚ್.ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ  ಅನುಮತಿ ಹಿಂಪಡೆಯುವಂತೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶ್ರೇಯಸ್ ಪಟೇಲ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಹೊಳೆನರಸೀಪುರ ಪಟ್ಟಣದ ಬಯಲು ಮಂದಿರದಲ್ಲಿ ಕಾರ್ಯಕ್ರಮಕ್ಕೆ  ಫೆಬ್ರವರಿ.೧೫ ರಂದು  ಅನುಮತಿ ನೀಡಿದ್ದರು. ನಮಗೆ ಅನುಮತಿ ನೀಡಿದ ಮರು ದಿನವೇ ತಮಗೂ ಮೊದಲೇ ಕ್ರಿಕೆಟ್ ತಂಡಕ್ಕೆ ಅನುಮತಿ ನೀಡಲಾಗಿದೆ ಎಂದು ಸುಳ್ಳು ಹೇಳಿ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇಡೀ ರಾಜ್ಯದಲ್ಲಿ ಪ್ರಜಾ ದ್ವನಿ ಯಾತ್ರೆ ಯಶಸ್ವಿಯಾಗಿದೆ. ಆದ್ರೆ ಹೊಳೆ ನರಸೀಪುರ ತಾಲೂಕಿನಲ್ಲಿ ರಾಜಕೀಯ ದುರುದ್ದೇಶದಿಂದ ಈ ರೀತಿ ಮಾಡುತ್ತಿದ್ದಾರೆ, ಈಗಾಗಲೇ ಹೊಳೆನರಸೀಪುರದಲ್ಲಿ ಬದಲಾವಣೆ ಬಯಸಿರುವ ಜನರು ಈ ಬಾರಿ ಕಾಂಗ್ರೆಸ್ ಬೆಂಬಲಿಸಲು  ಮುಂದಾಗಿದ್ದಾರೆ ಎಂದರು. ಅಧಿಕಾರಿಗಳನ್ನು ಹೆದರಿಸಿ ಬೆದರಿಸಿ ಆಡಳಿತ ನಡೆಸಿರುವ ರೇವಣ್ಣ ಕುಟುಂಬಕ್ಕೆ  ಈ ಬಾರಿಯ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

ಈಗಾಗಲೇ ನಿಗದಿಯಾಗಿರುವ ಸಮಯಕ್ಕೆ ಹಾಗೂ ನಿಗದಿಯಾಗಿರುವ ಸ್ಥಳದಲ್ಲಿ ಕಾರ್ಯಕ್ರಮ ಮಾಡಿಯೇ ತೀರುತ್ತೇವೆ, ಕಾರ್ಯಕ್ರಮದಲ್ಲಿ ಗಲಾಟೆ ನಡೆದರೆಶಾಸಕರು, ಜಿಲ್ಲಾಡಳಿತವೇ ಹೊಣೆಯಾಗುತ್ತದೆ. ಕೂಡಲೇ ಜಿಲ್ಲಾಡಳಿತ ಮಧ್ಯ ಪ್ರವೇಶ ಮಾಡಿ ಸಮಸ್ಯೆ ಬಗೆಹರಿಸಿ ಕಾರ್ಯಕ್ರಮ ನಡೆಸಲು ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ವಿಶ್ವನಾಥ್, ಮುಜಾಹಿದ್, ಪುಟ್ಟರಾಜ, ಸುನಿಲ್, ಗೋವಿಂದ್ ರಾಜ್ ಇತರರು ಉಪಸ್ಥಿತರಿದ್ದರು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

2 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

2 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

2 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

2 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

4 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

4 hours ago