Categories: ಹಾಸನ

ಹಾಸನ: ದೇವೇಗೌಡರ ತವರಲ್ಲಿ  ಕಾಂಗ್ರೆಸ್ “ಪ್ರಜಾಧ್ವನಿ”ಗೆ ಅದ್ಧೂರಿ ಜನಸ್ಪಂದನೆ!

ಹಾಸನ: ‘ಪ್ರಜಾಧ್ವನಿ’ ಯಾತ್ರೆಯ ಮೂಲಕ ಜೆಡಿಎಸ್ ಭದ್ರಕೋಟೆ, ವರಿಷ್ಠ ಹೆಚ್.ಡಿ.ದೇವೇಗೌಡ ತವರು ಜಿಲ್ಲೆ ಹಾಸನದಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ನಾಯಕರ ಪ್ರಯತ್ನ ಬಹುತೇಕ ಯಶಸ್ವಿ ಯಾಗಿದೆ ಎನ್ನಬಹುದು, ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಇದು ಮಹತ್ವ ಪಡೆದಿದೆ.

ಅರಕಲಗೂಡು ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಕೃಷ್ಣೇಗೌಡ, ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾದ ಬನವಾಸೆ ರಂಗಸ್ವಾಮಿ, ಬಾಗೂರು ಮಂಜೇಗೌಡ, ಬೇಲೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಚಿವ ಬಿ.ಶಿವರಾಮು ಅವರ ಅಪಾರ ಬೆಂಬಲಿಗರು ರ್‍ಯಾಲಿಗೆ ಆಗಮಿಸುವ ಮೂಲಕ ಬಹಿರಂಗವಾಗಿ ಶಕ್ತಿ ಪ್ರದರ್ಶನ ಮಾಡಿದಂತಾಗಿದೆ.

ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಬೆಂಗಳೂರು (ಗ್ರಾಮಾಂತರ) ಸಂಸದ ಡಿ.ಕೆ.ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ್ ಎರಡು ಬಾರಿ ಹಾಸನಕ್ಕೆ ಭೇಟಿ ನೀಡಿ ಹಿರಿಯ ಮುಖಂಡರು, ಟಿಕೆಟ್ ಆಕಾಂಕ್ಷಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ? ಪ್ರಜಾಧ್ವನಿ ಯಾತ್ರೆ? ಯಶಸ್ವಿಗೆ ಶ್ರಮಿಸುವಂತೆ ಸೂಚಿಸಿದ್ದರು. ಯಾತ್ರೆಗೆ ಹೆಚ್ಚಿನ ಕಾರ್ಯಕರ್ತರನ್ನು ಕರೆತರುವ ಮೂಲಕ ಹಿರಿಯ ನಾಯಕರ ಮುಂದೆ ತಮ್ಮ ಶಕ್ತಿ ಪ್ರದರ್ಶಿಸಲು ಟಿಕೆಟ್ ಆಕಾಂಕ್ಷಿಗಳ ನಡುವೆ ಪೈಪೋಟಿ ಇತ್ತು ಈ ಹಿನ್ನೆಲೆಯಲ್ಲಿ ಪ್ರತಿ ತಾಲ್ಲೂಕು ಕೇಂದ್ರದಿಂದ ಸಾರಿಗೆ ಬಸ್ ಹಾಗೂ ಖಾಸಗಿ ವಾಹನದ ಮೂಲಕ ಸಾವಿರಾರು ಸಂಖ್ಯೆ ಯಲ್ಲಿ ಕಾರ್ಯಕರ್ತರು ಮತ್ತು ಮಹಿಳೆಯರು ಭಾಗವಹಿಸಿದ್ದರು.

ಹಾಸನ ನಗರದ ಪ್ರಮುಖ ರಸ್ತೆಗಳು ಮತ್ತು ವೃತ್ತಗಳಲ್ಲಿ ವಿವಿಧ ನಾಯಕರ ಬ್ಯಾನರ್, ಬಂಟಿಂಗ್ಸ್ ಮತ್ತು ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ದ್ರುವನಾರಾಯಣ್ ,ಮಾಜಿ ಸಚಿವರಾದ ಹೆಚ್.ಸಿ. ಮಹದೇವಪ್ಪ, ಹೆಚ್.ಎಂ.ರೇವಣ್ಣ ಸೇರಿದಂತೆ ಹತ್ತಾರು ಕಾಂಗ್ರೆಸ್ ಮುಖಂಡರ ಬ್ಯಾನರ್, ಡಿಕೆಶಿ , ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅವರ ಆಳೆತ್ತರದ ಬ್ಯಾನರ್ ವೇದಿಕೆಯ ಎದುರು ಹಾಗೂ ನಗರದ ಪ್ರವೇದ್ವಾರದಲ್ಲಿ ಹಾಕಲಾಗಿತ್ತು.

ಬೃಹತ್ ರ್‍ಯಾಲಿ:
ಡಿಕೆಶಿ,ಸಿದ್ದರಾಮಯ್ಯ ನೇತೃತ್ವದಲ್ಲಿ ನಗರದ ಡೈರಿ ವೃತ್ತದಿಂದ ತಣ್ಣೀರು ಹಳ್ಳದ ವೇದಿಕೆಯ ವರೆಗೆ ನೂರಾರು ಸಂಖ್ಯೆ ಯಲ್ಲಿ ಬೈಕ್ ರ್ಯಾಲಿ ಮಾಡಲಾಯಿತು. ರಸ್ತೆಯುದ್ದಕ್ಕು ನೂರಾರು ಮಂದಿ ಕಾರ್ಯಕರ್ತರು ಮತ್ತು ಸಾರ್ವಜನಿಕರಿಗೆ ನಾಯಕರು ಕೈಬೀಸಿದರು.

ಸೇಬಿನ ಬೃಹತ್ ಹಾರ:
ನಗರಕ್ಕೆ ಪ್ರಜಾಧ್ವನಿ ಯಾತ್ರೆಗೆ ಆಗ ಮಿಸುವ ಡಿಕೆಶಿ ಮತ್ತು ಸಿದ್ದರಾಮಯ್ಯ ಆಗಮನದ ಹಿನ್ನೆಲೆಯಲ್ಲಿ ತಣ್ಣೀರು ಹಳ್ಳದ ಸರ್ಕಲ್ ನಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಕ್ರೇನ್ ಮೂಲಕ ತಮ್ಮ ನೆಚ್ಚಿನ ನಾಯಕರಿಗೆ ಬೃಹತ್ ಹಾರ ಹಾಕುವುದ ರೊಂದಿಗೆ ಸ್ವಾಗತಿಸಿದರು.

ವೇದಿಕೆಗೆ ಕಾಂಗ್ರೆಸ್ ಹಿರಿಯ ನಾಯಕರು ಆಗಮಿಸುತ್ತಿದ್ದಂತೆ ಪಟಾಕಿ ಸಿಡಿಸಿ ಕಾಂಗ್ರೆಸ್ ಪಕ್ಷದ ಜಯ ಘೋಷಣೆ ಮಾಡುತ್ತಾ ಅದ್ದೂರಿಯಾಗಿ ಸ್ವಾಗತಿಸಲಾಯಿತು.

Sneha Gowda

Recent Posts

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

5 mins ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

33 mins ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

51 mins ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

1 hour ago

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

1 hour ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

2 hours ago