Categories: ಹಾಸನ

ಹಾಸನ: ರಾಜ್ಯಾಧ್ಯಕ್ಷೆ ಸ್ಥಾನ ಯಾವುದೇ ಚರ್ಚೆ ನಡೆದಿಲ್ಲ- ಭವಾನಿ ರೇವಣ್ಣ

ಹಾಸನ: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಅಲಂಕರಿಸುವ ವಿಚಾರವಾಗಿ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಭವಾನಿ ರೇವಣ್ಣ ಸ್ಪಷ್ಟಪಡಿಸಿದರು.

ನಗರದ ಸಂಸದರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷದ ಅಧ್ಯಕ್ಷ ಸ್ಥಾನದ ಕುರಿತು ನಮ್ಮ ಕುಟುಂಬದಲ್ಲಿ ಮಾತುಕತೆ ನಡೆದಿಲ್ಲ ಕೇವಲ ಕೆಲ ಪತ್ರಿಕೆಗಳಲ್ಲಿ ಈ ಬಗ್ಗೆ ವರದಿ ಬಂದಿರುವುದನ್ನು ನೋಡಿದ್ದೇನೆ. ಯಾವುದೇ ಒಂದು ಹುದ್ದೆ ಅಥವಾ ಪದವಿ ನಮಗೆ ಭಗವಂತ ದಯಪಾಲಿಸಿದರೆ ಮಾತ್ರ ಅದನ್ನು ಪಡೆಯಲು ಸಾಧ್ಯ ಎಂಬ ನಂಬಿಕೆಯೊಂದಿಗೆ ಮುನ್ನಡೆಯುತ್ತಿದ್ದೇನೆ ಈ ಹಿಂದಿನ ಚುನಾವಣೆ ಟಿಕೆಟ್ ಕೈತಪ್ಪಿ ದಾಗಲು ಇದೇ ಮಾತು ಹೇಳಿದ್ದೆ ಎಂದು ನೆನಪಿಸಿದರು.

ಈ ಬಾರಿಯ ವಿಧಾನಸಭೆ ಚುನಾವಣೆ ಯಲ್ಲಿ ಸ್ವರೂಪ್ ಅವರನ್ನು ಗೆಲ್ಲಿಸಿಕೊಂಡು ಬರುವ ಮೂಲಕ ದೇವೇಗೌಡರ ಹುಟ್ಟುಹಬ್ಬಕ್ಕೆ ಕೊಡುವೆಯಾಗಿ ನೀಡುವುದಾಗಿ ಹೇಳಿದ್ದೆವು ಅದ ರಂತೆ ಇಡೀ ಕುಟುಂಬ ಹಾಗೂ ಮುಖಂಡರು ಕಾರ್ಯಕರ್ತರು ಸಹಕಾರದಿಂದ ಸ್ವರೂಪ್ ಅವರು ೮,೦೦೦ಕ್ಕೂ ಹೆಚ್ಚು ಮತಗಳಿಂದ ಗೆಲುವು ಪಡೆದಿದ್ದಾರೆ. ಇದಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಹಾಸನ ಲೋಕಸಭಾ ಕ್ಷೇತ್ರ ದಿಂದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಸ್ಪರ್ಧೆ ನಡೆಸಿದರೆ ಅವರಿಗೆ ಮೊದಲ ಆದ್ಯತೆ ನೀಡ ಲಾಗುವುದು ಪ್ರಜ್ವಲ್ ರೇವಣ್ಣ ಕಳೆದ ಬಾರಿ ಸ್ಪರ್ಧೆ ವಿಚಾರವಾಗಿ ದೇವೇಗೌಡರೇ ತೀರ್ಮಾನ ಕೈಗೊಂಡಿದ್ದರು ಆದರೆ ಅವರನ್ನು ಕುಟುಂಬದವರೇ ಬೇರೆ ಕ್ಷೇತ್ರಕ್ಕೆ ಕಳುಹಿಸಿದರು ಎಂಬ ಅಪವಾ ದವು ಕೇಳಿ ಬಂದಿತ್ತು ಎಂದು ಹೇಳಿದರು.

ಮುಂದಿನ ಲೋಕಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇದ್ದು ಪ್ರತಿ ತಾಲೂಕು ಮಟ್ಟದಲ್ಲಿ ಮುಖಂಡರು ಕಾರ್ಯ ಕರ್ತರು ಸೇರಿದಂತೆ ಎಲ್ಲರೂ ಒಗ್ಗೂಡಿ ಲೋಕಸಭಾ ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸುವು ದಾಗಿ ಭವಾನಿ ರೇವಣ್ಣ ಇದೆ ವೇಳೆ ತಿಳಿಸಿದರು.

ಈ ವೇಳೆ ಶಾಸಕ ಸ್ವರೂಪ್ ಪ್ರಕಾಶ್ , ಸ್ವಾಮೀ ಗೌಡ ಇದ್ದರು.

Ashika S

Recent Posts

ಪೋಕ್ಸೋ ಕೇಸ್; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಇಂದು ಮಧ್ಯಾಹ್ನ ನ್ಯಾಯಾಲಯಕ್ಕೆ ಶರಣಾದರು. ಪೋಕ್ಸೋ ಪ್ರಕರಣದಡಿ…

18 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್​ಗೆ ಟ್ವಿಸ್ಟ್‌ : ಸಂತ್ರಸ್ಥೆ ಅತ್ತೆಯಿಂದ ಸ್ಫೋಟಕ ಮಾಹಿತಿ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ರೇವಣ್ಣ‌, ಪ್ರಜ್ವಲ್ ವಿರುದ್ಧ…

29 mins ago

ಮಾಜಿ ಮುಖ್ಯಮಂತ್ರಿ ಎಸ್.ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದಿ ಎಸ್​ಎಂ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆಗಾಗಿ…

51 mins ago

ಅರಿಯಡ್ಕ ಗ್ರಾಮದ ಕೆರೆಮೂಲೆ ನಿವಾಸಿ ನಾಪತ್ತೆ

ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

52 mins ago

ಸಿದ್ದಾರೂಢ ಕಾಲೋನಿಯಲ್ಲಿ ವಿನೋದ್‌ ಅಸೂಟಿ ಮತಯಾಚನೆ

ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು,ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಧಾರವಾಡ ನಗರದ ವಾರ್ಡ್ ೫ (ಸಿದ್ದಾರೂಢ…

1 hour ago

ಮರು ಬಿಡುಗಡೆಯಾಗುತ್ತಿದೆ ಪುನೀತ್ ರಾಜಕುಮಾರ್ ಅಭಿನಯದ ‘ಅಂಜನಿಪುತ್ರ’

ಪುನೀತ್ ರಾಜಕುಮಾರ್  ಅವರು ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ ಚಿತ್ರ ‘ ಅಂಜನಿಪುತ್ರ’  ಮೇ 10 ರಂದು ಮರು ಬಿಡುಗಡೆಯಾಗುತ್ತಿದೆ.

1 hour ago