News Karnataka Kannada
Thursday, May 09 2024
ಹಾಸನ

ಸೌಧಿಯಲ್ಲಿ ಅಪಘಾತ: ಹಾಸನದ ಯುವಕ ಸಾವು

Hassan youth dies in road accident in Soudha
Photo Credit : News Kannada

ಸಕಲೇಶಪುರ: ಅಪಘಾತದಲ್ಲಿ ಸಕಲೇಶಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿ ಒಟ್ಟು ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಕಳೆದ ರಾತ್ರಿ ಸೌಧಿ ಅರೇಬಿಯಾ ದಲ್ಲಿ ನಡೆದಿದೆ.

ಅಕೀಲ್, ನಾಸಿರ್, ರಿಝಾ ನ್, ಶಿಹಾಬ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಖುರೈಸ್ ರಸ್ತೆಯ ಬಳಿ ಕಳೆದ ರಾತ್ರಿ ಈ ಅಪಘಾತ ಸಂಭವಿಸಿದೆ.

ನಾಲ್ವರು ಕಾರಿನಲ್ಲಿ ಹೋಗುತ್ತಿದ್ದಾಗ ಖುರೈಸ್ ರಸ್ತೆಯ ಬಳಿ ಒಂಟೆಗೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿದ್ದವರು Sಂಕಿಅಔ ಎಂಬ ಕಂಪನಿಯಲ್ಲಿ ನೌಕರರಾಗಿದ್ದರು. ಕಾರಿನಲ್ಲಿದ್ದ ಓರ್ವ ಬಾಂಗ್ಲಾದೇಶದ ಯುವಕ ಕೂಡ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಮೃತದೇಹಗಳನ್ನು ಅಲ್ ಹಸ್ಸಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸಂತ್ರಸ್ತ ಕುಟುಂಬವನ್ನು ಸಂಪರ್ಕಿಸಿ ಮಾಹಿತಿ ನೀಡಲಾಗಿದೆ.
ಅಕೀಲ್ ಅವರು ಮಂಗಳೂರಿನ ಬೋಳಾರ್ ರಿಝಾನ್ ಹಳೆಯಂಗಡಿ ಕದಿಕೆ ನಿವಾಸಿ ಎಂದು ತುಳಿದು ಬಂದಿದೆ.

ಸಕಲೇಶಪುರ ಪಟ್ಟಣದ ಶೂ ಬಜಾರ್ ಮಾಲೀ ಕರಾದ ಅಹಮದ್ ರವರ ತಮ್ಮನ ಮಗ ನಾಸಿರ್( ೨೨) ಉದ್ಯೋಗ ಅರಸಿ ವಿದೇಶಕ್ಕೆ ತೆರಳಿದ್ದರು. ಇದೀಗ ರಸ್ತೆ ಅಪ ಘಾತದಲ್ಲಿ ಮೃತಪಟ್ಟ ನಾಸಿರ್ ಕುಟುಂಬ ದುಃಖದಲ್ಲಿ ಕಣ್ಣೀರಿಡುತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು