ಹಾಸನ

50 ನಾಯಕರನ್ನು ಕರೆದುಕೊಂಡು ಬರುತ್ತೇನೆ ಎಂದು ಹೇಳಿದ್ದಾರೆ: ಬಾಂಬ್‌ ಸಿಡಿಸಿದ ಎಚ್‌ಡಿಕೆ

ಹಾಸನ: ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ಭವಿಷ್ಯದ ಕುರಿತು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಈ ಸರ್ಕಾರ ಮುಂದೆ ಏನಾಗುತ್ತೆ ಅನ್ನುವುದು ಗೊತ್ತಾಗುತ್ತದೆ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ನಾನು ಐವತ್ತು ಜನರನ್ನು ಕರೆದುಕೊಂಡು ನಿಮ್ಮ ಜತೆ ಬರುತ್ತೇನೆ ಎಂದು ಕೇಂದ್ರದ ನಾಯಕರ ಬಳಿ ಕೆಲವರು ಮಾತನಾಡಿರುವ ಬಗ್ಗೆ ಮಾಹಿತಿ ಇದೆ. ಅವರವರ ಅನುಕೂಲಕ್ಕೆ ತಕ್ಕಂತೆ ಮಾಡುತ್ತಾರೆ ಎನ್ನುವ ಮೂಲಕ, ಪರೋಕ್ಷವಾಗಿ ಕಾಂಗ್ರೆಸ್‌ ಪ್ರಮುಖ ನಾಯಕರೇ ಐವತ್ತು ಶಾಸಕರನ್ನ ಕರೆ ತರುವ ಬಗ್ಗೆ ಬಿಜೆಪಿ ನಾಯಕರ ಜೊತೆ ಮಾತನಾಡಿದ್ದಾರೆ ಎಂದರು.

ಲೋಕಸಭಾ ಚುನಾವಣೆ ಕಳೆದ ಮೇಲೆ ಮಹಾರಾಷ್ಟ್ರದಲ್ಲಿ ಏನಾಯ್ತು ಗೊತ್ತಲ್ಲ? ಅದೇ ರೀತಿ ಇಲ್ಲಿ ಯಾರು ಏನಾಗುತ್ತಾರೋ ಗೊತ್ತಿಲ್ಲ. ಈ ದೇಶದಲ್ಲಿ ಇವತ್ತಿನ ರಾಜಕಾರಣ ನೋಡಿದಾಗ ಏನು ಬೇಕಾದರೂ ನಡೆಯಬಹುದು. ಇಲ್ಲಿ ಯಾರಿಗೂ ಪ್ರಮಾಣಿಕತೆ, ನಿಷ್ಠೆ ಎನ್ನುವುದೇ ಉಳಿದಿಲ್ಲ. ಅವರವರ ಸ್ವಾರ್ಥಕ್ಕೆ ಏನೇನು ಆಗಬೇಕೋ ಅದನ್ನು ಮಾಡಿಕೊಂಡು ಹೋಗುತ್ತಾರೆ ಅಷ್ಟೇ ಎಂದರು.

ಇವತ್ತು ಇಲ್ಲಿ ಇರುತ್ತಾರೆ. ಅನುಕೂಲ ಆಗಬೇಕಾದರೆ ಇನ್ನೊಂದು ಕಡೆ ಹೋಗುತ್ತಾರೆ. ಇದು ರಾಜಕೀಯದಲ್ಲಿ ನಡೆದುಕೊಂಡು ಬಂದಿದೆ.

Gayathri SG

Recent Posts

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

5 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

13 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

29 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

31 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

42 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

42 mins ago