News Karnataka Kannada
Sunday, April 14 2024
Cricket
ಹಾಸನ

ಶಕ್ತಿ ಯೋಜನೆ ಜಾರಿ ಬಳಿಕ ಮಹಿಳೆಯರ ಓಡಾಟ ಹೆಚ್ಚಳ: ಬಸ್ ಹತ್ತಲು ವಿದ್ಯಾರ್ಥಿಗಳು- ಮಹಿಳೆಯರ ಪರದಾಟ

Bus
Photo Credit : News Kannada

ಹಾಸನ: ಪ್ರತಿನಿತ್ಯ ಸಾರಿಗೆ ಬಸ್ ಹತ್ತಲು ವಿದ್ಯಾರ್ಥಿಗಳು ಹಾಗೂ ಮಹಿಳೆಯರು ಪರದಾಡುವ ಪರಿಸ್ಥಿತಿ ಹಾಸನ ಜಿಲ್ಲೆ, ಅರಸೀಕೆರೆ ಸೇರಿದಂತೆ ಬಹುತೇಕ ತಾಲೂಕಿನಲ್ಲಿ ಕಂಡುಬಂದಿದೆ.

ಅರಸೀಕೆರೆ ಬಸ್ ನಿಲ್ದಾಣದಿಂದ ಪ್ರತಿದಿನ ಬೆಳಿಗ್ಗೆ ಹೊರಡುವ ಅರಸೀಕೆರೆ-ಬಾಣಾ ವಾರ-ಬೇಲೂರು ಮಾರ್ಗದ ಸಾರಿಗೆ ಬಸ್‌ಗೆ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ನೂಕುನುಗ್ಗಲಿನಲ್ಲಿ ಹತ್ತಬೇಕಿದೆ.

ಈ ಮಾರ್ಗದಲ್ಲಿ ಬೆಳಿಗ್ಗೆ ಎಂಟು ಗಂಟೆ ಸಮಯದಲ್ಲಿ ಬಸ್‌ಗಳ ಓಡಾಟ ಸಂಖ್ಯೆ ಕಡಿಮೆ ಯಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ ಕಾಲೇಜಿಗೆ ತೆರ ಳಲು ವಿದ್ಯಾರ್ಥಿಗಳು ಪರದಾಡಬೇಕಿದೆ.

ಶಕ್ತಿ ಯೋಜನೆ ಜಾರಿಯಾದ ಮೇಲೆ ಮಹಿಳೆಯರ ಓಡಾಟ ಸಂಖ್ಯೆಯೂ ಹೆಚ್ಚಾಗಿದ್ದು, ಬಸ್ ಹತ್ತಲು ಮಹಿಳೆಯರು ಹಾಗೂ ವಿದ್ಯಾರ್ಥಿಗಳ ನಡುವೆ ತಳ್ಳಾಡುವಂತಾಗಿದೆ.

ಪ್ರತಿನಿತ್ಯ ನೂಕುನುಗ್ಗಲಿನಲ್ಲಿ ಬಸ್ ಹತ್ತುವ ಪರಿಸ್ಥಿತಿ ನಿರ್ಮಾಣವಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಹೆಚ್ಚವರಿ ಬಸ್‌ಗಳನ್ನು ಓಡಿಸುವಂತೆ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು