Categories: ಹಾಸನ

ಅರೇಹಳ್ಳಿ ಜಿ.ಪಂ ವ್ಯಾಪ್ತಿಯ ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಬೇಲೂರು: ತಾಲೂಕಿನ ಅರೇಹಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಸ್ಥಳಿಯ ಪ್ರಭಾವಿ ಜೆಡಿಎಸ್ ಮುಖಂಡರಾದ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪ ತುಂಬ ದೇವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಪಿ. ಮಲ್ಲೇಶ್ ಅಲ್ಪಸಂಖ್ಯಾತರ ಮುಖಂಡ ಮುಸ್ತಾಫ ಇತ್ತಿಚೆಗೆ ಕಾಂಗ್ರೆಸ್ ಮುಖಂಡರಾದ ತುಳಸಿದಾಸ್ ಗೃಹದಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಎಚ್. ಕೆ. ಜವರೇಗೌಡ ಜಿಲ್ಲಾಧ್ಯಕ್ಷ ಇ. ಗ್ರಾನೈಟ್ ರಾಜ ಶೇಖರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ರಾಜ್ಯ ಸಭಾ ಸದಸ್ಯ ಎಚ್ .ಕೆ ಜವರೇಗೌಡ ಅಧಿಕಾರದ ಆಸೆಗೆ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯೊಂದಿಗೆ ಅಪವಿತ್ರ ಮೈತ್ರಿ ಮಾಡಿ ಕೊಂಡಿರುವ ಜೆಡಿಎಸ್ ಪಕ್ಷಕ್ಕೆ ಜಿಲ್ಲೆಯ ಜನರು ತಕ್ಕ ಪಾಠ ಕಲಿಸಲಿದ್ದಾರೆ ಚುನಾವಣೆ ಪ್ರಚಾರಕ್ಕಾಗಿ ಜಿಲ್ಲೆಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಆಗಮಿಸುತ್ತಿದ್ದು ಅಂದು ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದರು.

ಈ ಬಾರಿಯ ಲೋಕ ಸಭಾ ಚುನಾವಣೆಯ ಫಲಿತಾಂಶ ೧೯೯೯ ಅಂತೆ ಮರುಕಳಿಸುವ ಸಾಧ್ಯತೆ ಇದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ರವರು ಪ್ರಚಂಡ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದರು. ಮುಖ್ಯಮಂತ್ರಿ ಸಿದ್ದರಾ ಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸುಭದ್ರವಾದ ಆಡಳಿತ ನೀಡಲಾಗುತ್ತದೆ ಸರ್ಕಾರದ ೫ ಗ್ಯಾರೆಂಟಿ ಯೋಜನೆಗಳು ಪ್ರತಿಯೊಂದು ಮನೆಗಳಿಗೂ ತಲುಪುತ್ತಿದ್ದು ಸರ್ಕಾರದ ಸಾಧನೆ ಹಾಗೂ ಅಭಿವೃದ್ಧಿಗಾಗಿ ಮತ ದಾರರು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಲಿ ದ್ದಾರೆ ಎಂದರು.

ಮಾಜಿ ಜಿಲ್ಲಾಧ್ಯಕ್ಷ ಜಾವಗಲ್ ಮಂಜು ನಾಥ್ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಕೃಷ್ಣೇಗೌಡ ಹೇಮಂತ್ ಹಾಜರಿದ್ದರು

Chaitra Kulal

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago