News Karnataka Kannada
Friday, May 10 2024
ಹಾಸನ

ಚೆಕ್​ ಬೌನ್ಸ್​ ಪ್ರಕರಣ: ನಟ ನೀನಾಸಂ ಅಶ್ವತ್ಥ್ ಬಂಧನ

ashwath ninasam
Photo Credit : Twitter

ಹಾಸನ: ಹಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನೀನಾಸಂ ಅಶ್ವತ್ಥ್​ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಚೆಕ್​ ಬೌನ್ಸ್​ ಪ್ರಕರಣದಲ್ಲಿ ಅವರ ಬಂಧನ ಆಗಿದೆ. ಹಾಸನದ ಬಡಾವಣೆ ಠಾಣೆ ಪೊಲೀಸರು ನೀನಾಸಂ ಅಶ್ವತ್ಥ್ ಅವರನ್ನು ಅರೆಸ್ಟ್​ ಮಾಡಿದ್ದಾರೆ. ಜಡ್ಜ್​ ಎದುರು ಅವರು ತಪ್ಪು ಒಪ್ಪಿಕೊಂಡಿದ್ದಾರೆ. ಅಲ್ಲದೇ ಶೇ. 25ರಷ್ಟು ಹಣವನ್ನು ಪಾವತಿ ಮಾಡಿದ್ದಾರೆ. ಹಾಗಾಗಿ ನೀನಾಸಂ ಅಶ್ವತ್ಥ್​ ಅವರಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಇನ್ನುಳಿದ ಹಣವನ್ನು ಪಾವತಿಸಲು ಅವರು ಸಮಯಾವಕಾಶ ಕೋರಿದ್ದಾರೆ.

ನಟ ನೀನಾಸಂ ಅಶ್ವತ್ಥ್​ ಅವರು ಹಾಸನದ ರೋಹಿತ್​ ಎಂಬುವವರಿಂದ ಹಸು ಖರೀದಿ ಮಾಡಿದ್ದರು. ಆಗ 1.5 ಲಕ್ಷ ರೂಪಾಯಿ ಮೌಲ್ಯದ ಚೆಕ್​ ನೀಡಿದ್ದರು. ಆದರೆ ಹಣ ಪಡೆಯಲು ರೋಹಿತ್​ ಅವರು ಬ್ಯಾಂಕ್​ಗೆ ಹೋದಾಗ ಚೆಕ್​ಬೌನ್ಸ್​ ಆಗಿರುವುದು ತಿಳಿದುಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಹಾಸನದ ಜೆಎಮ್‌ಎಫ್‌ಸಿ‌ ಕೋರ್ಟ್‌ನಲ್ಲಿ‌ ರೋಹಿತ್​ ಅವರು ಕೇಸ್ ಹಾಕಿದ್ದರು. ಈ ಪ್ರಕರಣದಲ್ಲಿ ನೀನಾಸಂ ಅಶ್ವತ್ಥ್​ ಅವರು ಕೋರ್ಟ್​ಗೆ ಹಾಜರಾಗಿರಲಿಲ್ಲ. ಐದನೇ ಬಾರಿಗೆ ಅರೆಸ್ಟ್​ ವಾರೆಂಟ್​ ಜಾರಿ ಮಾಡಲಾಗಿತ್ತು. ಇದೀಗ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಬಿಡುಗಡೆ ಮಾಡಲಾಗಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು