ಹಾಸನ

ಮುಖ್ಯಮಂತ್ರಿ ಆಗಿ ಕುಮಾರಸ್ವಾಮಿ ಪ್ರಮಾಣ ಸ್ವೀಕರಿಸುವುದು ಶತಸಿದ್ಧ: ಹೆಚ್.ಡಿ. ದೇವೇಗೌಡ

ಬೇಲೂರು: ಮೆ. ೧೦ ರಂದು ಮತದಾನ, ೧೩ಕ್ಕೆ ಎಣಿಕೆ, ೧೮ ರಂದು ಎಚ್.ಡಿ ಕುಮಾರಸ್ವಾಮಿ ಮುಖ್ಯ ಮಂತ್ರಿ ಆಗಿ ಪ್ರಮಾಣ ಸ್ವೀಕರಿಸುವುದು ಶತಸಿದ್ಧ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತಿಳಿಸಿದರು.

ಬೇಲೂರು ಸಮೀಪದಲ್ಲಿರುವ ಸುರಪುರದಲ್ಲಿ ನಡೆದ ಬೃಹತ್ ಸಭೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಕೆ.ಎಸ್.ಲಿಂಗೇಶ್ ಪರ ಪ್ರಚಾರ ನಡೆಸಿ ಅವರು ಮಾತನಾಡಿದರು. ತಾಲೂಕಿನ ನಿಷ್ಠಾವಂತ, ಸರಳ, ಸಜ್ಜನಿಕೆಯ ಕೆ.ಎಸ್.ಲಿಂಗೇಶ್ ಅವರನ್ನು ಮತ್ತೆ ಗೆಲ್ಲಿಸಬೇಕು. ಕ್ಷೇತ್ರದ ಜನತೆ ನಡುವೆ ಇದ್ದು, ಜನಾನುರಾಗಿ ಆಗಿರುವ ಶಾಸಕ ಲಿಂಗೇಶ್ ಒಳ್ಳೆಯ ವ್ಯಕ್ತಿತ್ವ ಉಳ್ಳವರಾಗಿದ್ದಾರೆ ಇಂತಹ, ಸರಳ ಸಜ್ಜನಿಕೆಯ ಇವರನ್ನು ಮತ್ತೆ ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸುವಂತೆ ಅವರು ಕಾರ್ಯಕರ್ತರಿಗೆ ಸಲಹೆ ನೀಡಿದರು.

ಜಾತ್ಯತೀತ ಜನತಾ ದಳದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮಾತನಾಡಿ, ಈ ರಾಜ್ಯದ ಜ್ವಲಂತ ಸಮಸ್ಯೆಗಳಾದ ಅರೋಗ್ಯ, ವಸತಿ, ಶಿಕ್ಷಣ, ನೀರಾವರಿ ಬಗೆಹರಿಸಲು ಸೇರಿದ್ದೇವೆ. ನೀರಾವರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲ ತಾಯಿ ಧೋರಣೆ ತೋರುತ್ತಿದೆ. ದೇವೇಗೌಡರು ಪ್ರಧಾನಿ ಆಗಿದ್ದ ವೇಳೆಯಲ್ಲಿ ಕರ್ನಾಟಕ ರಾಜ್ಯದ ನೀರಾವರಿಗೆ ೧೮೦೦ ಕೋಟಿ ಅನು ದಾನ ಮೀಸಲಿರಿಸಿದ್ದರು. ಕರ್ನಾ ಟಕಕ್ಕೆ ಹೆಚ್ಚು ಅನುದಾನ ನೀಡಿ ರಸ್ತೆ,ವಿಮಾನ ನಿಲ್ದಾಣ ಮಾಡಿದ್ದರು. ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೇರಳ ರಾಜ್ಯದ ಜನರು ಸ್ವಾಭಿಮಾನದಿಂದ ಪ್ರಾದೇಶಿಕ ಪಕ್ಷ ಗಳನ್ನು ಅಧಿಕಾರಕ್ಕೆ ತಂದಿದ್ದಾರೆ. ಇಂತಹ ಸ್ವಾಭಿಮಾನ ಕರ್ನಾಟಕದ ಜನತೆಗೆ ಏಕಿಲ್ಲ ಎಂದರು.

ಬಿಜೆಪಿ ಪಕ್ಷಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ. ದೇಶದಲ್ಲಿ ರೈತರಿಗೆ ರಕ್ಷಣೆ ಇಲ್ಲ,ಉತ್ತಮ ಅರೋಗ್ಯ ವ್ಯವಸ್ಥೆ ಇಲ್ಲ. ಪ್ರವಾಹ ಬಂದ ಸಮಯದಲ್ಲಿ ಪ್ರಧಾನಿ ಕರ್ನಾ ಟಕಕ್ಕೆ ಬಂದಿಲ್ಲ. ಈಗ ಚುನಾವಣೆ ಸಮ ಯದಲ್ಲಿ ಕರ್ನಾಟಕಕ್ಕೆ ಬಂದಿ ರೋದು ಯಾಕೆ. ಬಿಜೆಪಿಯ ೨೫ ಸಂಸದರು ನಿಷ್ಪ್ರಯೋಜಕರು. ಕರ್ನಾ ಟಕದ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾ ರದ ಮುಂದೆ ಚರ್ಚಿಸಲು ಸಿದ್ದರಿಲ್ಲ ಎಂದು ಆರೋಪಿಸಿದರು.

ಮೋದಿ ಅವರಿಗೆ ಹೆಂಡ್ತಿ ಇಲ್ಲ ಮಕ್ಕಳಿಲ್ಲ ನಿಮಗೆ ಏನು ಗೊತ್ತು ಜನರ ಕಷ್ಟವೆಂದು ಆಕ್ರೋಶ ವ್ಯಕ್ತಪಡಿಸಿ ಬಿಜೆಪಿಯ ಭ್ರಷ್ಟ ಸರ್ಕಾರವನ್ನು ಈಗಾಗಲೇ ನೀವೆಲ್ಲ ನೋಡಿದ್ದೀರಾ ಕುಮಾರಣ್ಣ ಮುಖ್ಯಮಂತ್ರಿಯಾಗಲು ಅವಕಾಶ ಕೊಡಿ ರಾಜ್ಯವೆ ಅಭಿವೃದ್ಧಿಯಾಗುತ್ತದೆ ಎಂದರು.

ತೊ.ಚ.ಅನಂತಸುಬ್ಬಾರಯ, ಎಂ.ಎ.ನಾಗರಾಜು, ಸಿ.ಹೆಚ್.ಮಹೇ ಶ್, ಬಿಟ್ರವಳ್ಳಿ ಉಮೇಶ್, ಶ್ರೀನಿಧಿ, ನಾಗೇಶ್, ಲತಾ ದೀಲಿಪ್  ಇದ್ದರು.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

8 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

8 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

9 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

9 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

9 hours ago