ಹಾಸನ

ಮೋದಿ ಅವರು 3ನೇ ಬಾರಿ ಈ ದೇಶದ ಪ್ರಧಾನಿ ಆಗೋದನ್ನು ತಪ್ಪಿಸಲು ಸಾಧ್ಯವಿಲ್ಲ

ಹಾಸನ: ಪ್ರಧಾನಿ ನರೇಂದ್ರ ಮೋದಿ ಅವರು 3ನೇ ಬಾರಿ ಈ ದೇಶದ ಪ್ರಧಾನಿ ಆಗೋದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಹಾಸನ ತಾಲೂಕಿನ ಚನ್ನಂಗಿಹಳ್ಳಿ ಗ್ರಾಮದ ಕೆರೆಕೋಡಿಯಮ್ಮ ಹಾಗೂ ಈಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ಮಂಡ್ಯ ಕ್ಷೇತ್ರದ್ದು ಪ್ರತಿ ದಿನ ಒಂದು ಧಾರಾವಾಹಿ ಇರಲೇಬೇಕು. ನಿಖಿಲ್ ಕುಮಾರಸ್ವಾಮಿ ಅವರನ್ನ ರಾಜಕೀಯವಾಗಿ ಮುಗಿಸಲೇಬೇಕು ಎಂದು ಯಾವ ರೀತಿ ರಾಜಕೀಯ ಮಾಡಿದ್ರು. ಪಾಪ ಅವನು ಅಮಾಯಕ, ಒಂದು ತಿಂಗಳಿನಿಂದ ಧಾರಾವಾಹಿ ನಡೆಯುತ್ತಿದೆ. ಈ ಜಿಲ್ಲೆಯಲ್ಲೂ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು. ಸಣ್ಣಪುಟ್ಟ ಸಮಸ್ಯೆಗಳಿವೆ, ಸರಿಪಡಿಸಿಕೊಳ್ಳುತ್ತೇವೆ. ಒಟ್ಟಿನಲ್ಲಿ ನರೇಂದ್ರ ಮೋದಿ ಅವರು 3ನೇ ಬಾರಿ ಪ್ರಧಾನಿ ಆಗೋದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಬೀಗಿದ್ದಾರೆ.

ಕೆಂಪಣ್ಣ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ. ಅದಕ್ಕೆ ಸಾಕ್ಷಿ ಕೊಡಲಿ ಎನ್ನುತ್ತಾರೆ. ಇದೇ ಕೆಂಪಣ್ಣನವರ ಹೇಳಿಕೆ ಇಟ್ಟುಕೊಂಡೇ `ಪೇ ಸಿಎಂ’ ಎಂದ ಡಂಗೂರ ಹೊಡೆದರು. ಈಗ ಇವರು ಮಾಡ್ತಿರೋದೇನು? ಇಂತಹ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು. ಮೈತ್ರಿ ಪಕ್ಷಗಳು 28ಕ್ಕೆ 28 ಕ್ಷೇತ್ರವನ್ನೂ ಗೆಲ್ಲಬೇಕು ಅನ್ನೋದು ನಮ್ಮ ಉದ್ದೇಶ ಎಂದು ಹೇಳಿದ್ದಾರೆ.

ಇತ್ತೀಚಿಗೆ ರಾಜಕೀಯ ಸಂಘರ್ಷ ನಡೆಯುತ್ತಿದ್ದು, ಕೇಂದ್ರ-ರಾಜ್ಯ ಸರ್ಕಾರದ ನಡುವೆ ವಾಗ್ದಾಳಿ ನಡೆಯುತ್ತಿದೆ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಫೆ.16 ಬಜೆಟ್ ಮಂಡನೆಗೆ ಸಮಯ ನಿಗದಿ ಮಾಡಿದ್ದು, ವಿಧಾನಸಭೆ ಕಲಾಪದಲ್ಲಿ ಎಲ್ಲಾ ವಿಷಯಗಳ ಬಗ್ಗೆ ಮಾತನಾಡಲು ತೀರ್ಮಾನ ಮಾಡಿದ್ದೇನೆ. ಅಂಕಿ-ಅಂಶಗಳನ್ನಿಟ್ಟುಕೊಂಡು ಚರ್ಚೆ ಮಾಡ್ತೀನಿ.

ಕೇಂದ್ರದಿಂದ ರಾಜ್ಯಕ್ಕೆ ತೆರಿಗೆ ಹಣ ಕೊಡುವ ವ್ಯವಸ್ಥೆ ಆರಂಭವಾಗಿದ್ದು ಯಾವಾಗ? ಈಗ ದೊಡ್ಡಮಟ್ಟದಲ್ಲಿ ಕೇಂದ್ರದ ಮೇಲೆ ದಾಳಿ ನಡೆಯುತ್ತಿದೆ. ಈ ರಾಜ್ಯದಲ್ಲಿ ದಾಖಲೆಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿಗಳು ನೀವೆ, ಈಗ ಕೇಂದ್ರ ಸರ್ಕಾರದಿಂದ ಅನ್ಯಾಯ ಆಗಿದೆ ಎಂದು ಹೇಳಿತ್ತಿದ್ದೀರಿ ಎಂದು ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

Ashika S

Recent Posts

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

6 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

7 mins ago

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

26 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

36 mins ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

51 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

1 hour ago