ಹಾಸನ

ನುಗ್ಗೇಹಳ್ಳಿ: ಕಸ್ತೂರಿ ಕನ್ನಡ ಗೆಳೆಯರ ಬಳಗದ ವತಿಯಿಂದ ಸಮಾಜಮುಖಿ ಕೆಲಸಕ್ಕೆ ಹೆಚ್ಚಿನ ಒತ್ತು

ನುಗ್ಗೇಹಳ್ಳಿ : ಶ್ರೀ ಕಸ್ತೂರಿ ಕನ್ನಡ ಗೆಳೆಯರ ಬಳಗದ ವತಿಯಿಂದ ಸಮಾಜಮುಖಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ವ್ಯಕ್ತಿಗಳನ್ನು ಗೌರವಿಸುವ ಕೆಲಸವನ್ನು ಹತ್ತಾರು ವರ್ಷಗಳಿಂದ ನೆಡೆಸಿಕೊಂಡು ಬರುತ್ತಿದೆ ಎಂದು ನುಗ್ಗೇಹಳ್ಳಿ ಪುರ ವರ್ಗ ಹಿರೇಮಠದ ಡಾ. ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಗ್ರಾಮದ ಶ್ರೀ ಕಸ್ತೂರಿ ಕನ್ನಡ ಗೆಳೆಯರ ಬಳಗದ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ಕಾಯಕಯೋಗಿ ಪ್ರಶಸ್ತಿ ಪ್ರಧಾನ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳ ಹಗಲಿರಳು ಪರಿಶ್ರಮದಿಂದ ಕರ್ನಾಟಕದಲ್ಲಿ ಕನ್ನಡ ಭಾಷೆ ಉಳಿದಿದೆ ಅನ್ಯ ಭಾಷಿಕರ ದಬ್ಬಾಳಿಕೆಯನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿವೆ ಗಡಿ ಭಾಷೆ ವಿಚಾರದಲ್ಲಿ ಅವರ ಹೋರಾಟ ಮೆಚ್ಚುವಂಥದ್ದು ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು ಇಡೀ ದೇಶದಲ್ಲಿ ಏಳು ಜ್ಞಾನಪೀಠ ಪ್ರಶಸ್ತಿಗಳು ಕನ್ನಡ ಭಾಷೆಗೆ ಒಲಿದಿರುವುದೇ ಇದಕ್ಕೆ ಸಾಕ್ಷಿ ಎಂದರು ಸಂಘ ಸಂಸ್ಥೆಗಳಿಂದ ಸಮಾಜದಲ್ಲಿ ಎಲೆಮರೆಯಂತೆ ಸಾಧನೆ ಮಾಡಿರುವ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸುವ ಕೆಲಸವನ್ನು ಮಾಡುವಂತೆ ಸಲಹೆ ನೀಡಿದರು. ಕಸ್ತೂರಿ ಕನ್ನಡ ಗೆಳೆಯರ ಬಳಗದ ಅಧ್ಯಕ್ಷ ಎನ್ ಸಿ ನಟೇಶ್ ಮಾತನಾಡಿ ನಮ್ಮಿಂದ ಕಸಿದುಕೊಳ್ಳಲು ಸಾಧ್ಯವಾಗದ ಸಂಪತ್ತು ಎಂದರೆ ಅದು ವಿದ್ಯೆ ಮಾತ್ರ ಪೋಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಲು ಪೋಷಕರು ಹೆಚ್ಚಿನ ಒತ್ತು ಕೊಡುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಯಕಯೋಗಿ ಪ್ರಶಸ್ತಿಗಳನ್ನು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎನ್ ಜೆ.ಸೋಮನಾಥ್, ಪ್ರಗತಿಪರ ರೈತ ಶಂಕರಣ್ಣ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಲಕ್ಷ್ಮಿಕಾಂತ್, ನಿವೃತ್ತ ಯೋಧ ಎನ್ ಎಸ್ ನಟರಾಜು ಅವರನ್ನು ಪ್ರಶಸ್ತಿ ಫಲಕ ನೀಡಿ ವಿಶೇಷವಾಗಿ ಗೌರವಿಸಲಾಯಿತು ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಅಬ್ದುಲ್ ಬಸಿತ್, ಸವಿತಾ, ಕರಿಬಸಪ್ಪ, ಎಚ್ ಡಿ ಧರಣಿ ಕುಮಾರ್, ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ರಸಮಂಜರಿ ಕಾರ್ಯಕ್ರಮ ನೆಡೆಯಿತು.

ಕಾರ್ಯಕ್ರಮದಲ್ಲಿ ಉದ್ಯಮಿ ಎನ್ ಎನ್ ದೇವರಾಜು( ಸಬ್ಸಿಡಿ) ಹಾಸನಾಂಬ ಕಲಾ ಕ್ಷೇತ್ರದ ಮಹಿಳಾ ಜಿಲ್ಲಾಧ್ಯಕ್ಷ ಕಲ್ಪನಾ, ಮುಖಂಡರಾದ ಎಂಎಂ ರಾಮಕೃಷ್ಣೇಗೌಡ, ತಾಲೂಕು ರೈತ ಸಂಘದ ಅಧ್ಯಕ್ಷ ಎಸ್ ಎಸ್ ರಾಮಚಂದ್ರು, ಸಂಘದ ಪದಾಧಿಕಾರಿಗಳಾದ ಎನ್ ಎನ್ ಕೃಷ್ಣಮೂರ್ತಿ, ಎಚ್ ಬಿ ಕೃಷ್ಣೇಗೌಡ, ಜೆ ಎಲ್ ರವಿ, ಎನ್ ಎನ್ ರಘು, ಯೋಗರಾಜ್, ಬಿ ಆರ್ ಬಸಪ್ಪ, ನಾಗರಾಜು ಬಂಡೆಕೆರಿ, ಏನ್ ಜಿ ನಾಗೇಶ್, ಪ್ರಕಾಶ್, ನಂಜುಂಡೇಗೌಡ, ಕಿಶನ್ ಕುಮಾರ್, ಜಮೀಲ್ ಪಾಷಾ, ರಾಜು ಮೊಬೈಲ್, ಏನ್ ಎಂ ಅಬ್ದುಲ್ ಸತ್ತಾರ್, ವಸಂತ ಬೇಕರಿ, ಕೂಲಿಗಾರರ ಸಂಘದ ಮುಖಂಡರಾದ ಪುಟ್ಟಣ್ಣ, ಸೇರಿದಂತೆ ಅನೇಕರು ಹಾಜರಿದ್ದರು.

ಫೋಟೋ ಸುದ್ದಿ : ನುಗ್ಗೇಹಳ್ಳಿ ಗ್ರಾಮದ ಶ್ರೀ ಕಸ್ತೂರಿ ಕನ್ನಡ ಗೆಳೆಯರ ಬಳಗದ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ಕಾಯಕಯೋಗಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಏನ್ ಜೆ. ಸೋಮನಾಥ್ ಅವರ ಶಿಕ್ಷಣ ಕ್ಷೇತ್ರದ ಸಾಧನೆ ಪರಿಗಣಿಸಿ ಕಾಯಕಯೋಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು ಡಾ. ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ಸಂಘದ ಅಧ್ಯಕ್ಷ ಎನ್‌ಸಿ ನಟೇಶ್ ಸೇರಿದಂತೆ ಇತರರು ಇದ್ದರು.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago