Categories: ಹಾಸನ

ಹಂಗರಹಳ್ಳಿ : ರೈಲ್ವೆ ಲೆವೆಲ್ ಕ್ರಾಸಿಂಗ್ ಸಂಚಾರಕ್ಕೆ ಮುಕ್ತ

ಹಾಸನ: ಮೈಸೂರು-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಹಂಗರಹಳ್ಳಿ ರೈಲ್ವೆ ಮೇಲ್ಸೇತುವೆ ದುರಸ್ತಿ ಕಾರ್ಯ ಸದ್ಯಕ್ಕೆ ಮುಕ್ತಾಯ ವಾಗುವ ಲಕ್ಷಣ ಕಾಣದ ಹಿನ್ನೆಲೆ ಯಲ್ಲಿ ರೈಲ್ವೆ ಇಲಾಖೆ ಲೆವೆಲ್ ಕ್ರಾಸಿಂಗ್ ವ್ಯವಸ್ಥೆ ಮರು ಸ್ಥಾಪಿಸಿದೆ. ಇದರಿಂದ ಸುತ್ತುಬಳಸಿನ ಹಾದಿ ಸವೆಸಿ ಸುಸ್ತಾಗಿದ್ದ ಸಾರ್ವಜನಿಕರು ನಿಟ್ಟುಸಿಬಿಟ್ಟಿದ್ದಾರೆ.

ನಿರ್ಮಾಣವಾದ ಮೂರು ವರ್ಷಗಳಲ್ಲಿ ಐದಾರು ಬಾರಿ ಕುಸಿತವಾಗಿದ್ದ ಹಂಗರಹಳ್ಳಿ ರೈಲ್ವೆ ಮೇಲ್ಸೇತುವೆ ದುರಸ್ತಿಗಾಗಿ ಕಳೆದ ಡಿಸೆಂಬರ್ ನಲ್ಲಿ ಮಾರ್ಗವನ್ನು ಬಂದ್ ಮಾಡಲಾಗಿತ್ತು. ಎಲ್ಲ ವಾಹನಗಳೂ ಪಡುವಲಹಿಪ್ಪೆ ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚಿಸಲಾಗಿತ್ತು. ಕಿರಿದಾದ ಸುತ್ತು ಬಳಸಿನ ಹಾದಿಯಲ್ಲಿ ಸಂಚರಿಸಿ ಪ್ರಯಾಣಿಕರು ಬೇಸತ್ತಿದ್ದರು. ವಿದ್ಯಾರ್ಥಿಗಳು, ನೌಕರರು ನಿತ್ಯ ಹಾಸನ-ಹೊಳೆನರಸೀಪುರ ನಡುವೆ ಇಪ್ಪತ್ತು ನಿಮಿಷದ ಹೆಚ್ಚುವರಿ ಪ್ರಯಾಣದ ಅವಧಿಯಿಂದ ಹೈರಾಣಾಗಿದ್ದರು.

ಡಿಸೆಂಬರ್ ನಲ್ಲಿ ನಾಲ್ಕು ತಿಂಗಳ ಕಾಲ ಮೇಲ್ಸೇತುವೆ ಮೇಲೆ ವಾಹನ ಸಂಚಾರ ನಿಷೇಧಿಸಿ ಜಿಲ್ಲಾ ಧಿಕಾರಿ ಆದೇಶ ಹೊರಡಿಸಿದ್ದರು. ಆ ಅವಧಿ ಮುಗಿದರೂ ದುರಸ್ತಿ ಕೆಲಸ ಮುಕ್ತಾಯ ಆಗಿರಲಿಲ್ಲ.
ಹೀಗಾಗಿ ರೈಲ್ವೆ ಇಲಾಖೆ ಸಾರ್ವಜನಿಕ ವಲಯದ ಆಕ್ರೋ ಶದಿಂದ ಬಚಾವಾಗಲು ಈ ಹಿಂದೆ ಇದ್ದ ರೈಲ್ವೆ ಲೆವೆಲ್ ಕ್ರಾಸಿಂಗ್ ವ್ಯವಸ್ಥೆ ಮರು ಸ್ಥಾಪಿಸಿದೆ. ಹೀಗಾಗಿ ರೈಲು ಸಂಚಾರದ ಅವಧಿಯಲ್ಲಿ ರೈಲ್ವೆ ಗೇಟ್ ಕಾಯುವುದರ ಹೊರತುಪಡಿಸಿ ಸುಗಮ ಸಂಚಾರ ಸಾಧ್ಯವಾಗಲಿದೆ.

Nisarga K

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

2 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

3 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

3 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

3 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

4 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

4 hours ago