Categories: ಹಾಸನ

ಏಪ್ರಿಲ್‌ 30 ರಂದು ಚುನಾವಣಾ ಪ್ರಚಾರಕ್ಕಾಗಿ ಬೇಲೂರಿಗೆ ಪ್ರಧಾನಿ ನರೆಂದ್ರ ಮೋದಿ

ಹಾಸನ:  ಚುನಾವಣಾ ಪ್ರಚಾರಕ್ಕಾಗಿ ನಮ್ಮ ರಾಷ್ಟ್ರದ ಹೆಮ್ಮೆಯ ಪ್ರಧಾನಿ ನರೆಂದ್ರ ಮೋದಿಯವರು ಆಗಮಿಸುತ್ತಿದ್ದು ಈಗಾಗಲೇ ಎಲ್ಲಾ ರೀತಿಯಲ್ಲಿ ಪೂರ್ವ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಉತ್ತರ ದೆಹಲಿಯ ಸಂಸದ ರಮೇಶ್ ಬಿದಾನಿ ಹಾಗೂ ಹಾಸನ ಜಿಲ್ಲೆಯ ಚುನಾವಣಾ ಉಸ್ತುವಾರಿ ರೇಣುಕುಮಾರ್ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಏ. ೩೦ ರಂದು ದೇಶ ಕಂಡ ಅಪ್ರತಿಮ ನಾಯಕ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೆಂದ್ರ ಮೋದಿ ಇದೇ ೩೦ ರಂದು ಬೇಲೂರಿಗೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸುತ್ತಿದ್ದು ಅಂದು ಹಾಸನ ವಿಧಾನಸಭಾ ಕ್ಷೇತ್ರದ ೭ ಹಾಗೂ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ೩ ವಿಧಾನಸಭಾ ಕ್ಷೇತ್ರಗಳ ಜಂಟಿ ಸಭೆಯನ್ನು ಒಂದೇ ವೇಧಿಕೆಯಲ್ಲಿ ಚುನಾವಣಾ ಪ್ರಚಾರ ಮಾಡಲಾಗುತ್ತಿದ್ದು ಅದಕ್ಕಾಗಿ ಸುಮಾರು ೩೫ ಎಕರೆ ವಿಸ್ತಾರದ ಜಾಗದಲ್ಲಿ ಎಲ್ಲಾ ರೀತಿಯಲ್ಲಿ ಪೂರ್ವ ಸಿದ್ದತೆ ಮಾಡಲಾಗುತ್ತಿದೆ.

ಹಾಗೂ ಅಲ್ಲಿಯೇ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗುತ್ತಿದ್ದು ಯಾವುದೇ ರೋಡ್ ಶೋ ಇರುವುದಿಲ್ಲ. ಅಲ್ಲದೆ ೧೦ ವಿಧಾನಸಭಾ ಕ್ಷೇತ್ರಗಳ ಪರವಾಗಿ ಒಂದೇ ವೇದಿಕೆಯಲ್ಲಿ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಲಿದ್ದು ಈ ಬಾರಿ ೧೫೦ ಸೀಟ್ ಗೆಲ್ಲುವ ಮೂಲಕ ರಾಜ್ಯದಲ್ಲಿ ಮತ್ತೆ ಕಮಲ ಅರಳಿಸುವ ಕೆಲಸ ಮೋದಿಯವರು ಮಾಡಲಿದ್ದಾರೆ.

ಸುಮಾರು ೩ರಿಂದ೪ ಲಕ್ಷ ಅಭಿಮಾನಿಗಳು ಹಾಗೂ ಕಾರ್ಯ ಕರ್ತರು ಸೇರುವ ನಿರೀಕ್ಷೆ ಇದೆ. ಬಂದಂತ ವಾಹನಗಳಿಗೆ ಸುಮಾರು ೨೫ ಎಕರೆಯಷ್ಟು ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಕೆಂದ್ರ ಸಚಿವರು ನಾಯಕರು ಒಗ್ಗೂಡಿ ಕೆಲಸ ಮಾಡುತ್ತಿದ್ದು ಏನು ಕಾಂಗ್ರೆಸ್ ಪಕ್ಷವು ಮುಸ್ಲಿಮರ ಓಲೈಕೆಗಾಗಿ ಪಿಎಫ್ಐ ಸಂಘಟನೆಯನ್ನು ಬೆಳಸೆಲು ಓಲೈಸುತ್ತಿದೆ. ಆದರೆ ನಮ್ಮ ನರೆಂದ್ರ ಮೋದಿವರು ದೇಶದ ರಕ್ಷಣೆ ದೇಶಕ್ಕಾಗಿ ಪಕ್ಷವನ್ನು ಕಟ್ಟುವಂತ ಕೆಲಸವನ್ನು ೨೨೪ ಕ್ಷೇತ್ರಗಳಲ್ಲೂ ಕೆಲಸ ಮಾಡುವ ಅಭ್ಯರ್ಥಿಯನ್ನು ಹಾಕಿದ್ದು ಎಲ್ಲರ ಪರವಾಗಿ ಮತಯಾಚನೆಯಲ್ಲಿ ತೊಡಗಿದ್ದಾರೆ ಎಂದ ಅವರು ಹಾಸನ ಜಿಲ್ಲೆಯಲ್ಲಿ ಕನಿಷ್ಟ ೪ ಸ್ಥಾನಗಳನ್ನು ಗೆಲ್ಲಲಿದ್ದೇವೆ. ನೆಲೆ ಇಲ್ಲದ ಕಾಂಗ್ರೆಸ್ ಪಕ್ಷದ ಬಗ್ಗೆ ನಾವು ಎಲ್ಲಿಯೂ ಮಾತನಾಡುವುದಿಲ್ಲ.ಬೇಲೂರಿನಲ್ಲಿ ಪಕ್ಷದ ಬಗ್ಗೆ ಯಾವುದೇ ಗೊಂದಲವಿಲ್ಲ.ಎಲ್ಲರೂ ಸಹ ಒಗ್ಗೂಡಿ ಪಕ್ಷಕ್ಕಾಗಿ ಕೆಲಸವನ್ನು ಮಾಡುತ್ತಾರೆ.ಕೇಂದ್ರ ಹಾಗೂ ರಾಜ್ಯದ ಇತರ ನಾಯಕರು ಸಹ ಮೋದಿಯವರ ಜೊತೆಗೂಡಿ ಆಗಮಿಸಲಿದ್ದಾರೆ ಎಂದರು.

ಈ ತಾಲೂಕು ಅಧ್ಯಕ್ಷ ಅಡಗೂರು ಆನಂದ್, ತಾಲೂಕು ಚುನಾವಣಾ ಉಸ್ತುವಾರಿ ಪ್ರಸಾದ್,ದಿನೇಶ್,ಚೇತನ್ ಇದ್ದರು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

2 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago