Categories: ಹಾಸನ

ಬಡವರು ಬಡವರಾಗಿಯೇ ಉಳಿದಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣ: ಬಿವೈ ವಿಜಯೇಂದ್ರ

ಹಾಸನ: ಬಡವರು ಬಡವರಾಗಿಯೇ ಉಳಿದಿದ್ದರೇ ಅದಕ್ಕೆ ಕಾಂಗ್ರೆಸ್ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಜಿಲ್ಲೆಯ ಹೊಳೆನರಸೀಪುರದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸಿ ಮಾತನಾಡಿದ ಬಿವೈ ವಿಜಯೇಂದ್ರ, ಇದು ಎರಡು ಪಕ್ಷಗಳ ನಡುವಿನ ಹೋರಾಟ ಅಲ್ಲ. ದೇಶದಲ್ಲಿ ಮತ್ತೆ ಮೋದಿ ಪ್ರಧಾನಿಯಾಗಬೇಕು. ಕಾಂಗ್ರೆಸ್ ನವರು ರಾಜ್ಯದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಭ್ರಮೆಯಲ್ಲಿದ್ದಾರೆ. ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೇ ಏನು ಆಗುವುದಿಲ್ಲ. ಹಾಗಾಗಿ ಪ್ರಜ್ವಲ್ ರೇವಣ್ಣರನ್ನ ಮತ್ತೊಮ್ಮೆ ಗೆಲ್ಲಿಸಿ ಎಂದು ಮನವಿ ಮಾಡಿದರು.

ಇದೇ ವೇಳೆ ಶಿವಮೊಗ್ಗ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ವಿರುದ್ದ ಗುಡುಗಿದ ಬಿವೈ ವಿಜಯೇಂದ್ರ, ಶಿವಮೊಗ್ಗಕ್ಕೆ ಈಶ್ವರಪ್ಪ ಕೊಡುಗೆ ಏನು..? ರಾಘವೇಂದ್ರ ಕೊಡುಗೆ ಏನೆಂದು ಜನರಿಗೆ ಗೊತ್ತಿದೆ. ಈಶ್ವರಪ್ಪ ವಿರುದ್ದ ಶಿಸ್ತುಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ , ಹಾಸನದಲ್ಲಿ ಕಾಂಗ್ರೆಸ್ ಅವರಪ್ಪನಾಣೆ ಗೆಲ್ಲುವುದಿಲ್ಲ. ಕಾಂಗ್ರೆಸ್ ಪಕ್ಷ ನೂರಕ್ಕೆ ನೂರು ಗೆಲ್ಲಲ್ಲ. ಅಕಸ್ಮಾತ್ ಗೆದ್ದರು ಎಂದಾದರೆ ಗ್ರಾಮ ಪಂಚಾಯಿತಿಯಿಂದ ತೊಡಗಿ ದೆಹಲಿ ವರೆಗೆ ಪಾಕಿಸ್ತಾನ ಪರ ಘೋಷಣೆ ಕೇಳಬೇಕಾಗುತ್ತದೆ ಎಂದು ಹೇಳಿದರು.

ಈಗ ನಡೆಯು ತ್ತಿರುವುದು ಲೋಕಸಭೆ ಚುನಾವಣೆ. ಇದು ದೇಶದ ಚುನಾವಣೆ. ದೇಶ ಉಳಿಯಬೇಕೋ ಹಾಳಾಗಬೇಕೋ ಎಂಬುದು ಇನ್ನು ೧೨ ದಿನಗಳಲ್ಲಿ ತೀರ್ಮಾನ ಆಗಲಿದೆ ಎಂದು ಪ್ರಜ್ವಲ್ ರೇವಣ್ಣ ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ೨,೦೦೦ ರೂ. ನೀಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಹಿಳೆಯರಿಗೆ ಎರಡು ಸಾವಿರ ಕೊಟ್ಟು ಒಲಿಸಿಕೊಳ್ಳಬೇಕು ಎಂಬ ಲೆಕ್ಕಾಚಾರ ದಲ್ಲಿ ಕಾಂಗ್ರೆಸ್ ಇದೆ ಎಂದ ಅವರು, ಮಹಿಳೆಯರನ್ನು ಉದ್ದೇಶಿಸಿ, ‘ನಿಮಗೆ ಎರಡು ಸಾವಿರ ಕೊಟ್ಟು ನಿಮ್ಮ ಗಂಡಂದಿರಿಂದ ಸಾವಿರಾರು ರೂ. ವಸೂಲಿ ಮಾಡ್ತಾರೆ. ಒಂದೇ ವರ್ಷದಲ್ಲಿ ‘ಎಣ್ಣೆ’ (ಮದ್ಯ) ಬೆಲೆಯನ್ನು ನಾಲ್ಕು ಬಾರಿ ಜಾಸ್ತಿ ಮಾಡಿದ್ದಾರೆ’ ಎಂದರು.

ಈ ವೇಳೆ ಮಧ್ಯೆ ಪ್ರವೇಶಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ‘ಮಾತು ನಿಲ್ಲಿಸಿ ಪ್ರಜ್ವಲ್, ಅದು ಕೊಬ್ಬರಿ ಎಣ್ಣೆ ಅಂದುಕೊಂಡುಬಿಟ್ಟಾರು ಜನ’ ಎಂದರು. ಬಳಿಕ ಮಾತು ಮುಂದುವರಿಸಿದ ಪ್ರಜ್ವಲ್, ‘ಇಲ್ಲಾ ಅದು ರಾತ್ರಿ ತೆಗೆದುಕೊಳ್ಳುವ ‘ಎಣ್ಣೆ’. ಅದರ ಬೆಲೆ ನಾಲ್ಕು ಬಾರಿ ಜಾಸ್ತಿ ಆಗಿದೆ’ ಎಂದರು.

ರಾಜ್ಯಸಭಾ ಚುನಾವಣೆಯ ಗೆಲುವಿನ ಬಳಿಕ ವಿಧಾನಸೌಧದ ಆವರಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಬೆಂಬಲಿಗರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದು ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು. ಆರಂಭದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದನ್ನು ಕಾಂಗ್ರೆಸ್ ನಾಯಕರು ಅಲ್ಲಗಳೆದಿದ್ದರು. ಆದರೆ, ನಂತರ ಘೋಷಣೆ ಕೂಗಿದ್ದು ಎಫ್‌ಎಸ್‌ಎಲ್ ವರದಿಯಲ್ಲಿ ದೃಢಪಟ್ಟಿತ್ತು.

Maithri S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago