Categories: ಹಾಸನ

ಅಶ್ಲೀಲ ವಿಡಿಯೋ ವೈರಲ್ ಪ್ರಕರಣ; ಜೆಡಿಎಸ್‌ನಿಂದ ಪ್ರಜ್ವಲ್ ಉಚ್ಛಾಟನೆ

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಕೇಸ್‌ಗೆ ದೊಡ್ಡ ತಿರುವು ಸಿಕ್ಕಿದ್ದು, ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಬೆಂಕಿ ಹಚ್ಚಿರುವ ಕಾರಣಕ್ಕೆ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ್ದು ಅಂತಾ ಆರೋಪ ಮಾಡಿದ್ದ ಸಾವಿರಾರು ಅಶ್ಲೀಲ ವಿಡಿಯೋ ವೈರಲ್ ಆಗಿದ್ದವು. ಈ ಹಿನ್ನೆಲೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೀಗ, ಸ್ವತಃ ತಮ್ಮ ಮೊಮ್ಮಗನನ್ನೇ ಪಕ್ಷದಿಂದ ಉಚ್ಛಾಟನೆ ಮಾಡಲು ಆದೇಶಿಸಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಹಾಸನದಲ್ಲಿ ರಾಶಿ ರಾಶಿ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್ ಹಾದಿ ಬೀದಿಯಲ್ಲಿ ಸಿಕ್ಕಿದ್ದವು. ಈ ವಿಚಾರಕ್ಕೆ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿ ಆಗಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೂ ಮುಜುಗರ ಉಂಟಾಗಿತ್ತು. ಅಲ್ಲದೆ, ಸ್ವತಃ ಜೆಡಿಎಸ್ ಶಾಸಕರೇ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರಜ್ವಲ್ ರೇವಣ್ಣನನ್ನು ಜೆಡಿಎಸ್ ಪಕ್ಷದಿಂದಲೇ ಉಚ್ಛಾಟನೆ ಮಾಡಬೇಕು ಎಂದು ಬಂಡಾಯ ಎದ್ದಿದ್ದರು. ಈ ವಿಚಾರ ಜೆಡಿಎಸ್ ಪಕ್ಷದ ವರಿಷ್ಠರಿಗೆ ಭಯ ಮೂಡಿಸಿತ್ತು.

ಈಗಾಗಲೇ ಜೆಡಿಎಸ್ ಪಕ್ಷದಲ್ಲಿ ಅಸಮಾಧಾನದ ಹೊಗೆ ಆಡುತ್ತಿದ್ದು, ಇದೇ ಪರಿಸ್ಥಿತಿಗೆ ಸಿಲುಕಿ ಜೆಡಿಎಸ್ ಶಾಸಕರು ಪಕ್ಷವನ್ನೇ ಬಿಟ್ಟು ಹೋಗುವ ಸಾಧ್ಯತೆ ದಟ್ಟವಾಗಿದೆ. ಇದೇ ಕಾರಣಕ್ಕೆ ಪ್ರಜ್ವಲ್ ರೇವಣ್ಣ ಅವರನ್ನು ದಿಢೀರ್ ಉಚ್ಛಾಟನೆ ಮಾಡಲಾಗಿದೆ ಎಂದು ಚರ್ಚೆಗಳು ಕೂಡ ಶುರುವಾಗಿವೆ. ಆದರೆ ಪ್ರಜ್ವಲ್ ರೇವಣ್ಣ ಈಗ ಭಾರತದಲ್ಲೇ ಇಲ್ಲ, ವಿದೇಶಕ್ಕೆ ಎಸ್ಕೇಪ್ ಆಗಿದ್ದಾರೆ ಎಂಬ ಆರೋಪವನ್ನ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ.

ಮತ್ತೊಂದು ಕಡೆ ಪ್ರಜ್ವಲ್ ರೇವಣ್ಣ ವಿಚಾರ ಈಗ ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಚರ್ಚೆಗೆ ವೇದಿಕೆ ಒದಗಿಸಿದೆ. ಹಾಗೂ, ಕಾಂಗ್ರೆಸ್ ನಾಯಕರು ಇದೇ ವಿಚಾರ ಹಿಡಿದು ಪ್ರಧಾನಿ ಮೋದಿ ಅವರಿಗೆ ಪ್ರಶ್ನೆಯನ್ನು ಕೇಳುತ್ತಿದ್ದಾರೆ.

Maithri S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago