Categories: ಹಾಸನ

ಗ್ಯಾರಂಟಿ ಸಮಾವೇಶಕ್ಕೆ ಸರ್ಕಾರಿ ಬಸ್​: ಪರೀಕ್ಷೆಗೆ ಹೋಗಲು ವಿದ್ಯಾರ್ಥಿಗಳ ಪರದಾಟ

ಹಾಸನ: ರಾಜ್ಯಾದ್ಯಂತ ಇಂದಿನಿಂದ ದ್ವೀತಿಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ತೆರಳಲು ಸರ್ಕಾರಿ ಬಸ್​​ಗಳಿಲ್ಲದೆ ಹಾಸನ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರದಾಡಿದರು.

ಹೌದು ಹಾಸನದಲ್ಲಿ ಇಂದು (ಮಾ.01) ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಳಿಗ್ಗೆ 11 ಗಂಟೆಗೆ ಹಾಸನಕ್ಕೆ ತೆರಲಿದ್ದಾರೆ. ಈ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಜನರನ್ನು ಕರೆತರಲು ಕೆಎಸ್​ಆರ್​ಟಿಸಿಯ 700 ಬಸ್​​ಗಳನ್ನು ಬಳಸಲಾಗುತ್ತಿದೆ.

ಇದರಿಂದ ಹಾಸನ ನಗರ ಮತ್ತು ವಿವಿಧ ಗ್ರಾಮಗಳಿಗೆ ಬಸ್​​ ಸಂಪರ್ಕ ಸ್ಥಗಿತಗೊಳಿಸಲಾಗಿದೆ. ಬಸ್​​ ಇಲ್ಲದೆ ದ್ವಿತೀಯ ಪಿಯುಸಿ ಮತ್ತು ಪದವಿ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದು, ಪರೀಕ್ಷಾರ್ಥಿಗಳು ಪರದಾಡಿದ್ದಾರೆ.

ಪರೀಕ್ಷೆಗಳು ಇಂದಿನಿಂದ ಆರಂಭವಾಗುತ್ತದೆ ಎಂಬ ವಿಚಾರ ತಿಳಿದಿದ್ದರೂ ರಾಜ್ಯ ಸರ್ಕಾರ ಹಾಗೂ ಸಾರಿಗೆ ಅಧಿಕಾರಿಗಳು ಬಸ್​ಗಳನ್ನು ಕಾಂಗ್ರೆಸ್ ಸಮಾವೇಶಕ್ಕೆ ನಿಯೋಜಿಸುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ.

Ashitha S

Recent Posts

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

4 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

6 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

10 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

20 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

25 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

41 mins ago