ಹಾಸನ

ಸಕಲೇಶಪುರ: ಶಾಸಕ ಹೆಚ್.ಕೆ .ಕುಮಾರಸ್ವಾಮಿಗೆ ಹೆಬ್ಬನಹಳ್ಳಿ ಗ್ರಾಮಸ್ಥರಿಂದ ಹಿಡಿಶಾಪ

ಸಕಲೇಶಪುರ: ತಾಲೂಕಿನ ಬೆಳಗೋಡು ಹೋಬಳಿ ಹೆಬ್ಬನಹಳ್ಳಿ ಗ್ರಾಮ ತುಂಬಾ ದೊಡ್ಡ ಗ್ರಾಮವಾಗಿರುತ್ತದೆ ಆದರೆ ಹೆಚ್ ಕೆ ಕುಮಾರಸ್ವಾಮಿ ಸಕಲೇಶಪುದಲ್ಲಿ ಹಲವು ಬಾರಿ ಶಾಸಕರಾಗಿದ್ದಾರೆ ಆದರೆ ತಾಲೂಕಿನಲ್ಲಿ ದಲಿತ ಕುಟುಂಬಗಳು ಎಲ್ಲಿ ವಾಸ ಮಾಡುತ್ತಿದ್ದಾರೆ ಎನ್ನುವುದೇ ಅವರಿಗೆ ಸರಿಯಾಗಿ ತಿಳಿದಿರುವುದಿಲ್ಲ.

ಹೆಬ್ಬನ ಹಳ್ಳಿ (ಮಾಸ್ತಿಗಯ್ಯ )ಗ್ರಾಮಕ್ಕೆ ಮೂಲಭೂತ ಸೌಕರ್ಯ ಗಳಿಲ್ಲದೆ ಸಾರ್ವಜನಿಕರ ಪರದಾಟ ಹೆಚ್ಚಾಗಿದೆ. ಬೇರೆ ಕಡೆ ಎಲ್ಲಾ ರಸ್ತೆಗಳಿಗೆ ಸಿಮೆಂಟ್ ರಸ್ತೆ, ಜಲ್ಲಿ ರಸ್ತೆ, ಮುಂತಾದ ರಸ್ತೆಗಳನ್ನು ಮಾಡಿ ಅಭಿವೃದ್ಧಿ ಮಾಡಿದರೆ ಇಲ್ಲಿ ಮಾತ್ರ ಮಣ್ಣು ರಸ್ತೆ ಶಾಶ್ವತವಾಗಿದೆ. ಈ ರಸ್ತೆಯಲ್ಲಿ ಕನಿಷ್ಠ ಗುಂಡಿಗಳನ್ನು ಮುಚ್ಚುವ ಕೆಲಸಕ್ಕೂ ಗಮನಕೊಡದ ಶಾಸಕರಾಗಿದ್ದಾರೆ ಈ ಗ್ರಾಮಕ್ಕೆ ಸರಿಯಾಗಿ ಕುಡಿಯಲು ನೀರು ಇಲ್ಲ .ಸಿಮೆಂಟ್ ರಸ್ತೆ ವ್ಯವಸ್ಥೆ ಇಲ್ಲ .ಬಾಕ್ಸ್ ಚರಂಡಿ ವ್ಯವಸ್ಥೆ ಇಲ್ಲ. ಬೀದಿ ದೀಪಗಳ ವ್ಯವಸ್ಥೆ ಸರಿ ಯಾಗಿ ಇಲ್ಲ. ಇಂಥ ಪರಿಸ್ಥಿತಿಯಲ್ಲಿ ಜೀವನ ನಡೆಸು ತ್ತಿರುವ ಹೆಬ್ಬನಹಳ್ಳಿ (ಮಾಸ್ತಿಗಯ್ಯ ಕಾಲೋನಿ) ಗ್ರಾಮಸ್ಥರು ಈ ಬಾರಿ ಚುನಾವಣೆಯಲ್ಲಿ ಶಾಸಕ ಕುಮಾರಸ್ವಾಮಿಗೆ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಸಿದ್ದಾರೆ.

ಈ ಗ್ರಾಮದಲ್ಲಿ ಸುಮಾರು ೪೦ ಮನೆಗಳು ಇದ್ದು ಇದುವರೆಗೂ ಯಾವೊಬ್ಬ ಅಧಿಕಾರಿಗಳು ಕೂಡ ಇತ್ತ ಕಡೇ ಗಮನ ಹರಿಸದೆ ಹಾಗೂ ಯಾವೊಬ್ಬ ಜನಪ್ರತಿನಿಧಿ ಗಳಾಗಲಿ ಇತ್ತಕಡೆ ಮುಖ ಮಾಡದಿರುವುದು ಎಷ್ಟರ ಮಟ್ಟಿಗೆ ಸರಿ ಅನ್ನಿಸಿದೆ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ತಾಲೂಕು ಪಂಚಾಯಿತಿ ಸದಸ್ಯರು ಜಿಲ್ಲಾ ಪಂಚಾಯತ್ ಸದಸ್ಯರು ಎಲ್ಲಾ ಜನಪ್ರತಿನಿಧಿಗಳು ಚುನಾವಣೆ ಬಂದಾಗ ಮಾತ್ರ ಈ ಗ್ರಾಮಕ್ಕೆ ತೆರಳಿ ಆಶ್ವಾಸನೆ ನೀಡಿ ಹೋಗುತ್ತಾರೆ. ಚುನಾವಣೆಯಲ್ಲಿ ಗೆದ್ದ ನಂತರ ನಾವು ಬ್ಯುಸಿ ನಾವು ಬ್ಯುಸಿ ಎಂದು ಹಣ ಮಾಡುವ ಕಡೆಗೆ ಮುಂದಾಗುತ್ತಾರೆ ಆದರೆ ಈ ಗ್ರಾಮದ ಅಭಿವೃದ್ಧಿ ಮಾತ್ರ ಶೂನ್ಯ ಆಗಿರುತ್ತದೆ.

ಹಲವಾರು ವರ್ಷಗಳಿಂದ ಈ ರಸ್ತೆಗೆ ದುರಸ್ತಿ ಕಾಣದ ಪರಿಸ್ಥಿತಿ ಎದುರಾಗಿದೆ ಈ ರಸ್ತೆಯ ಪಕ್ಕದಲ್ಲಿ ಕಾಡು ಬೆಳೆದುಕೊಂಡು ವಾಹನ ಸಂಚಾರ ಮಾಡಲು ತೊಂದರೆ ಉಂಟಾಗಿದೆ. ಈ ವ್ಯಾಪ್ತಿಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೌಜನ್ಯಾಕ್ಕಾದರು ರಸ್ತೆ ಬದಿಯ ಲ್ಲಿರುವ ಕಾಡನ್ನು ತೆರವುಗೊಳಿಸಿ ರಸ್ತೆಯಲ್ಲಿ ಸುರಕ್ಷಿತವಾಗಿ ಸಂಚಾರ ಮಾಡಲು ಅನುಕೂಲ ಮಾಡಿ ಕೊಡಬೇಕಾಗಿದೆ. ಇತ್ತೀಚಿನ ದಿನಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಅಕ್ಕಪಕ್ಕ ದಿಂದ ರಸ್ತೆಗೆ ಬರುವ ಪ್ರಾಣಿಗಳು ಸಾರ್ವಜನಿಕರಿಗೆ ಗೊತ್ತಾಗು ವುದಿಲ್ಲ ಅಂದರೆ ಈ ರಸ್ತೆ ಅಕ್ಕ ಪಕ್ಕ ಕಾಡು ಬೆಳೆದು ನಿಂತಿದೆ ಅಭಿವೃದ್ಧಿ ಕಾಣದ ಪರಿಸ್ಥಿತಿ ಯಾಗಿದೆ. ಅದೇನೆ ಆಗಲಿ ಇನ್ನು ಕೆಲ ದಿನಗಳಲ್ಲಿ ಈ ಗ್ರಾಮಕ್ಕೆ ಮೂಲಭೂತ ಸೌಕರ್ಯ ಹಾಗೂ ಉತ್ತಮ ರಸ್ತೆ ನಿರ್ಮಾಣ ಮಾಡದೇ ಇದ್ದಲ್ಲಿ ಗ್ರಾಮಸ್ಥರೆಲ್ಲರೂ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗ ಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Gayathri SG

Recent Posts

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

4 mins ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

18 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

35 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

1 hour ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago