Categories: ಹಾಸನ

ಹೈನುಗಾರರ ನೆರವಿಗೆ ಎಲ್ಲರೂ ಸಹಕಾರ ನೀಡಬೇಕು: ಡಿ.ಕೆ ಶಿವಕುಮಾರ್

ಹಾಸನ: ನಾಡಿನ ರೈತರ ಹಾಲು ಉತ್ಪಾದಕರ ಹಿತಕ್ಕಾಗಿ ಕೆಎಂಎಫ್ (ನಂದಿನಿ) ಉಳಿಸಿ- ಬೆಳೆಸಬೇಕು ಇದಕ್ಕೆ ಎಲ್ಲರೂ ಸಹಕಾರ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿ ಇರುವ ನಂದಿನಿ ಹಾಲಿನ ಕೇಂದ್ರದಲ್ಲಿ ಸುಮಾರು ೨೫೦೦ ಬೆಲೆಯ ಹಾಲಿನ ಉತ್ಪನ್ನ ಹಾಗೂ ಹಾಲು ಖರೀದಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಂದಿನಿ ಕರ್ನಾಟಕ ರಾಜ್ಯದ ರೈತರ ಬದುಕಿನ ಪ್ರಶ್ನೆಯಾಗಿದ್ದು ಸುಮಾರು ೭೦ ಲಕ್ಷ ರೈತರು ಹಾಲು ಉತ್ಪಾದನೆ ಮಾಡಿ ನಂದಿನಿ ಡೈರಿಗೆ ಹಾಕುತ್ತಿದ್ದಾರೆ. ರೈತರೇ ಕಟ್ಟಿದಂತಹ ನಂದಿನಿ ಉಳಿಸುವ ಕೆಲಸ ಆಗಬೇಕಿದೆ ಎಂದರು.

ಗುಜರಾತ್ ರಾಜ್ಯದ ಅಮೋಲ್ ರೈತರದ್ದು ನಮ್ಮದೇನು ತಕರಾರಿನಿಲ್ಲ ಆದರೆ ನಮ್ಮನ್ನು ಹಿಂದೆ ಹಾಕಿ ಅವರನ್ನು ಮುಂದಕ್ಕೆ ಮಾಡಿ ಸರ್ಕಾರ ಪ್ರೋತ್ಸಾಹ ಮಾಡುವ ಕೆಲಸ ಮಾಡುವುದು ಸರಿಯಲ್ಲ ಎಂದರು.

“ನಂದಿನಿ ನಮ್ಮವಳು ನಮ್ಮ ಹಾಲು ನಮ್ಮ ಬದುಕು ನಮ್ಮ ರೈತರು” ಎಂದು ಹೇಳಿದ ಶಿವಕುಮಾರ್  ಎಲ್ಲಾ ಬೆಲೆಗಳು ಜಾಸ್ತಿಯಾಗಿದ್ದು ರೈತರಿಗೆ ಯಾವ ತರಹದ ಸಹಾಯವು ಆಗುತ್ತಿಲ್ಲ, ರೈತರಿಗೆ ಹಾಲು ಉತ್ಪಾದನೆ ಮಾಡಲು ಸರ್ಕಾರ ಸಹಾಯವನ್ನು ನೀಡುತ್ತಿಲ್ಲ ; ಈ ಮಧ್ಯೆ ನಮ್ಮ ಹಾಲನ್ನು ನಾವು ಮಾರಲು ಆಗುತ್ತಿಲ್ಲ ಅಂತಹ ಪರಿಸ್ಥಿತಿಯಲ್ಲಿ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಹಾಲಿನ ಉತ್ಪನ್ನ ಖರೀದಿ ಮಾಡುವ ಮೂಲಕ ನಮ್ಮ ರೈತರನ್ನು ಉಳಿಸಿಕೊಳ್ಳಲು ಹೊರ ಟಿದ್ದೇವೆ ಎಂದ ಅವರು ಕೆಎಂಎಫ್ ನ ಪ್ರಚಾರ ರಾಯಭಾರಿಯಾಗಿ ದಿವಂಗತ ಡಾ. ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಕೆಲಸ ಮಾಡಿದ್ದಾರೆ.

ಕೋಟ ಶ್ರೀನಿವಾಸ್ ಪೂಜಾರಿ ಅವರು ನಾವು ಇದನ್ನು ತಡೆಯಲು ಆಗುವುದಿಲ್ಲ ಎಂದಿದ್ದಾರೆ. ಇದು ಎಷ್ಟು ಸರಿ ಎಂದು ಪ್ರಶ್ನಿಸಿದರು, ಡಾ. ರಾಜ್ ಕುಮಾರ್ ಪುನೀತ್ ರಾಜ್ ಕುಮಾರ್ ರಾಜ್ಯಕ್ಕೆ ಮಾಡಿದ ಸೇವೆ ಏನು ಸ್ಮರಿಸಬೇಕು, ರಾಜ್ಯದ ರೈತರು ಹೆಣ್ಣು ಮಕ್ಕಳು ಬದುಕಬೇಕು ಎಂದು ದೊಡ್ಡ ದೊಡ್ಡ ನಟರು ರಾಯಭಾರಿಯಾಗಿ ಕೆಲಸ ಮಾಡಿದ್ದಾರೆ.

ಆದರೆ ಮುಖ್ಯಮಂತ್ರಿಗಳೇ ನೀವು ಅವರ ಬಗ್ಗೆ ಎಷ್ಟು ಗೌರವದ ಮಾತುಗಳನ್ನು ಆಡಿದ್ದೀರಿ ಎಂದು ಪ್ರಶ್ನಿಸಿದರು, ರೇಷ್ಮೆ ಸೇರಿದಂತೆ ಇತರೆ ಬೆಳೆಗಳ ಆಮದನ್ನು ನಿಯಂತ್ರಣ ಮಾಡಲಾಗುತ್ತಿದೆ. ಹೊರಗಡೆಯಿಂದ ಬರುವ ವಸ್ತುಗಳನ್ನು  ನಿಲ್ಲಿಸುವಂತೆ ನಾವು ಹೇಳುತ್ತಿಲ್ಲ ಮುಕ್ತ ಮಾರುಕಟ್ಟೆ ಸರಿ. ಆದರೆ ನಮ್ಮ ರೈತರನ್ನು ಉಳಿಸಿಕೊಳ್ಳಬೇಕಿದ್ದು ಮೊದಲು ನಿಮ್ಮ ಮನೆಯ ರೈತರನ್ನು ಉಳಿಸಿಕೊಳ್ಳಿ ಎಂದು ಹೇಳಿದ ಶಿವಕುಮಾರ್ ಅವರು ನಷ್ಟವಾದರೂ ಸಹ ರೈತರು ಕೆಎಂಎಫ್‌ಗೆ ಹಾಲನ್ನು ಹಾಕುತ್ತಿದ್ದಾರೆ. ನೀವೇ ಪ್ರೋತ್ಸಾಹ ಕೊಟ್ಟಿದ್ದೀರಿ ಎಂದರು.

ನಮ್ಮ ಕನಕಪುರಕ್ಕೆ ಬಂದು ನೋಡಿದರೆ ಸಾಕು ಕೆಎಂಎಫ್ ಯಾವ ಸ್ಥಿತಿಯಲ್ಲಿದೆ ಎಂದು ತಿಳಿಯಲಿದೆ. ರೇವಣ್ಣ ಅವರು ಹಾಸನದಲ್ಲಿ ಅಧ್ಯಕ್ಷರಾಗಿದ್ದಾರೆ ಅಲ್ಲಿ ಬಾಲಚಂದ್ರ ಜಾರಕಿಹೊಳೆ ಅಧ್ಯಕ್ಷರಾಗಿದ್ದು ಅಮೂಲ್ ಗಿಂತ ದೊಡ್ಡದಾದ ಘಟಕವನ್ನು ಸ್ಥಾಪಿಸಿ ಕನಕಪುರದಲ್ಲಿ ರೈತರಿಗೆ ನೆರವಾಗಿದ್ದೇವೆ. ಇದನ್ನು ಉಳಿಸುವ ಕೆಲಸ ಆಗಲೇಬೇಕು ಎಂದರು.

Sneha Gowda

Recent Posts

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ : ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…

22 seconds ago

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

3 mins ago

ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ.…

10 mins ago

ಕಲ್ಲಡ್ಕದಲ್ಲಿ ಪ್ರಥಮ ಮಳೆಗೆ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ : ಸಂಚಾರ ಅಸ್ತವ್ಯಸ್ತ

ನಿನ್ನೆ ಸುರಿದ ಪ್ರಥಮ ಮಳೆಗೆ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೊಡುಕುಂಟಾಗಿದೆ.

16 mins ago

ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಬಂಧನ

ಕೆನಡಾದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌…

29 mins ago

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ : ಆನ್‌ಲೈನ್‌ನಲ್ಲಿ ಹೀಗೆ ನೋಡಿ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದೆ. ಈ ವರ್ಷದ ತೇರ್ಗಡೆ ಪ್ರಮಾಣ…

37 mins ago