Categories: ಹಾಸನ

ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ

ಹಾಸನ:  ಮುಂದೆ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸಂಸದರನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯ ಅವರ ಕೈ ಭದ್ರಪಡಿಸುವುದರೊಂದಿಗೆ ಪೂರ್ಣಾವಧಿವರೆಗೆ ಅವರೇ ಸಿಎಂ ಆಗಿರುತ್ತಾರೆ ಎಂದು ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಹಾಸನದ ಹೊಳೆನರಸೀಪುರ ತಾಲ್ಲೂಕಿನ, ಅಣ್ಣೆಚಾಕನಹಳ್ಳಿ ಗ್ರಾಮದಲ್ಲಿ ನಡೆದ  ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು  ಹೆಚ್ಚು ಸ್ಥಾನ ಗೆದ್ದರೆ ಯಾವುದೇ ಅಡೆತಡೆ ಇಲ್ಲದೆ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು  ಹೇಳಿದ್ದಾರೆ.

ಚುನಾವಣೆಗೂ ಮೊದಲು ಐದು ಗ್ಯಾರೆಂಟಿ ಘೋಷಣೆ ಮಾಡಲಾಗಿತ್ತು. ಆದರೆ ಅಧಿಕಾರಕ್ಕೆ ಬಂದು  ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಸಿಧ್ದರಾಮಯ್ಯ ಅವರು ಐದು ಗ್ಯಾರಂಟಿ ಜಾರಿ ಮಾಡಿದ್ದಾರೆ ಆ ಮೂಲಕ ಮತ್ತೊಮ್ಮೆ ನುಡಿದಂತೆ ನಡೆಯುವದಾಗಿ ಸಾಬೀತು ಮಾಡಿದ್ದಾರೆ ಎಂದು ಹೇಳಿದರು.

ಬಡವರಿಗಾಗಿ, ಶೋಷಿತರಿಗಾಗಿ  ಕೆಲಸ ಮಾಡುವ ಹಂಬಲ ಕಾಂಗ್ರೆಸ್‌ಗೆ ಇದೆ. ಹೀಗಾಗಿ  ಸಿದ್ದರಾಮಯ್ಯ ಅವರಿಗೆ ನಿಮ್ಮ ಬೆಂಬಲ ನೀಡಬೇಕು. ಮುಂದೆ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಬೇಕಾಗಿದೆ. ಹೆಚ್ಚು ಸ್ಥಾನಗಳನ್ನು ಗೆಧ್ದರೆ ನೈತಿಕವಾಗಿ ಅವರಿಗೆ ಮತ್ತಷ್ಟು ಬೆಂಬಲ ಸಿಗುತ್ತದೆ ಎಂದು ತಿಳಿಸಿದರು.

ಗ್ಯಾರೆಂಟಿ ಯೋಜನೆಗೆ ವರ್ಷಕ್ಕೆ 56 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ.  ಸಾಮಾಜಿಕ ಕಾರ್ಯಕ್ರಮಕ್ಕಾಗಿ ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣ ಖರ್ಚು ಮಾಡಿಲ್ಲ. ಇಷ್ಟೊಂದು ಹಣ ಖರ್ಚು ಮಾಡುತ್ತಿರುವಾಗ ಜನರ ಬೆಂಬಲ ಬೇಕು. ಹೆಚ್ಚು ಸ್ಥಾನ ಗೆದ್ದರೆ ನಮಗೆ ಬಲ ಬರುತ್ತದೆ ಇದನ್ನು ಲೋಕಸಭಾ ಚುನಾವಣೆಯಲ್ಲಿ ಮತದಾರರು ತೋರಿಸಬೇಕು ಎಂದು ಕರೆ ನೀಡಿದರು.

Ashika S

Recent Posts

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

8 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

10 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

25 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

27 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

52 mins ago

ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿಯ ದುರಂತ ಅಂತ್ಯ

ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…

1 hour ago