News Karnataka Kannada
Tuesday, April 30 2024
ಹಾಸನ

ಕಡ್ಡಾಯ ಮತದಾನಕ್ಕೆ ಕ್ರೀಡಾಪಟು ಶೇಷಗೌಡ ಮನವಿ

VOTE, NewsKannada, LatestNews, government,
Photo Credit : News Kannada

ಹಾಸನ: ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ತಪ್ಪದೆ ಮತದಾನ ಮಾಡುವಂತೆ ಅಂತರಾಷ್ಟ್ರೀಯ ಹಾಕಿ ಕ್ರೀಡಾಪಟು ಹಾಗೂ ಯೂತ್ ಐಕಾನ್ ಶೇಷೇಗೌಡ ಸಲಹೆ ನೀಡಿದ್ದಾರೆ.

ತಾಲ್ಲೂಕಿನ ಶಾಂತಿಗ್ರಾಮ ಪಂಚಾಯಿತಿಯಲ್ಲಿ ಮತದಾನ ಜಾಗೃತಿ ಬೀದಿ ನಾಟಕಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮತದಾನ ಪ್ರತಿಯೊಬ್ಬರ ಹಕ್ಕಾಗಿದ್ದು, ಯಾವುದೇ ಆಸೆ, ಆಮಿಷಗಳಿಗೆ ಒಳಾಗಾಗದೆ ಮತಗಟ್ಟೆಗೆ ಹೋಗಿ ಮತ ಚಲಾಯಿಸುವ ಮೂಲಕ ಉತ್ತಮ ನಾಯಕರನ್ನು ಆಯ್ಕೆ ಮಾಡಿ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಲ್. ಯಶವಂತ್ ಮಾತನಾಡಿ, ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು ಹಾಗೂ ೮೦ ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿ ಸಿದ್ದು, ಅದರ ಸದುಪಯೋಗಪಡಿಸಿಕೊಂಡು ಮತ ಚಲಾಯಿಸುವಂತೆ ತಿಳಿಸಿದ್ದಾರೆ.
ಯಾವುದೇ ಉಡುಗೊರೆ, ವಸ್ತುಗಳಿಗೆ ಬಲಿಯಾಗದೆ ವಿಧಾನಸಭೆ ಚುನಾವಣೆಯಲ್ಲಿ ಶೇ, ೧೦೦ ರಷ್ಟು ಮತ ಚಲಾಯಿಸುವಂತೆ ಹೇಳಿದರು.

ಮತದಾನ ಜಾಗೃತಿ ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಹಿಡಿದು ಪ್ರಮುಖ ಬೀದಿಗಳಲ್ಲಿ ಕಾಲ್ನಡಿಗೆ ಜಾಥಾ ಹೋಗುವ ಮೂಲಕ ಸಾರ್ವಜನಿಕರಲ್ಲಿ ಕಡ್ಡಾಯ ಮತದಾನ ಬಗ್ಗೆ ಅರಿವು ಮೂಡಿಸಲಾಯಿತು.

ಬೀದಿ ನಾಟಕ ಪ್ರದರ್ಶನ ಹಾಗೂ ಮತದಾನದ ಗೀತೆಗಳನ್ನು ಹಾಡುವ ಮೂಲಕ ಮತದಾರರ ಪಟ್ಟಿಯಲ್ಲಿ ನೋಂದಾಣಿ ಹಾಗೂ ಮತ ಚಲಾವಣೆಯ ಬಗ್ಗೆ ಜಾಗೃತಿ ಮೂಡಿಸಿದರು. ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶಿವಕುಮಾರ್, ಶಾಂತಿಗ್ರಾಮ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ರಮೇಶ್, ಶಾಂತಿಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸುವಾಸ್ ಹಾಗೂ ಮತ್ತಿತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು