News Karnataka Kannada
Monday, April 29 2024
ಹಾಸನ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು: ಯುವಕ ಸಾವು

ಆತ್ಮಹತ್ಯೆ
Photo Credit : NewsKarnataka

ಹಾಸನ: ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳು ಇಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹೊಳೆನರಸೀಫುರದ ಹೇಮಾವತಿ ನದಿ ದಂಡೆಯ ಬಳಿ ಇರುವ ರೈಲ್ವೆ ಟ್ರ್ಯಾಕ್ ಬಳಿ ನಿನ್ನೆ(ಮಾ.18) ಸಂಜೆ ನಡೆದಿದೆ.

ನಗರನಹಳ್ಳಿಯ ರಾಜು(20) ಹಾಗೂ ಇದೇ ತಾಲ್ಲೂಕಿನ ದ್ವಿತೀಯ ಪಿಯುಸಿ ಯುವತಿ ನಡುವೆ ಇದ್ದ ಸ್ನೇಹ ಪ್ರೀತಿಗೆ ತಿರುಗಿ, ಮನೆಯಲ್ಲಿ ಇವರ ಪ್ರೀತಿಗೆ ಒಪ್ಪುವುದಿಲ್ಲ ಎಂದು ಊಹೆ ಮಾಡಿ ಇಬ್ಬರೂ ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ವಿಷ ಕುಡಿದು ಒದ್ದಾಡುತ್ತಿದ್ದ ಇಬ್ಬರನ್ನು ಕಂಡ ಸ್ಥಳೀಯರು, ಹೊಳೆನರಸೀಪುರ ನಗರ ಠಾಣೆ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದು, ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ತಮ್ಮದೇ ವಾಹನದಲ್ಲಿ ಪಟ್ಟಣದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ವೈದ್ಯಕೀಯ ಬೋದಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದ್ರೆ, ನಿನ್ನೆ ರಾತ್ರಿಯೇ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟರೆ, ಬಾಲಕಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು