News Karnataka Kannada
Monday, May 13 2024
ಹಾಸನ

ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ

Support to JD(S) candidate in Hassan
Photo Credit : News Kannada

ಹಾಸನ: ದಲಿತ ಸಂಘಟನೆಯ ಹಿರಿಯರೆಲ್ಲ ಸೇರಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದು ದಲಿತ ಮುಖಂಡ ಚೌಡಳ್ಳಿ ಜಗದೀಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಐದು ವರ್ಷ ಬಿಜೆಪಿ ಸರ್ಕಾರದ ಆಡಳಿತದಲ್ಲಿ ದಲಿತರ ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆಗಳು ಹೆಚ್ಚಿದ್ದು ಹಾಸನ ವಿಧಾನಸಭಾ ಕ್ಷೇತ್ರದಲ್ಲಿಯೂ ದಲಿತ ಸಮುದಾಯದ ಗುತ್ತಿಗೆದಾರರಿಗೆ ಅನ್ಯಾಯವಾಗಿದೆ, ಅಲ್ಲದೆ ದಲಿತರಿಗೆ ಹೆಚ್ಚಿನ ಆರ್ಥಿಕ ನೆರವನ್ನು ನೀಡದ ಹಿನ್ನೆಲೆಯಲ್ಲಿ ಈ ಹಿಂದೆ ತಿಳಿಸಿದಂತೆ ನಗರದಲ್ಲಿ ಸಭೆ ಸಭೆ ನಡೆಸಿದ್ದು ಎಲ್ಲರ ಅಭಿಪ್ರಾಯಗಳನ್ನು ಸಂಗ್ರಹಿಸಿ ಮುಖಂಡರೆಲ್ಲಾ ಸೇರಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಅವರಿ ಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದರ .

ಹಾಸನ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿ ಆಯಾ ದಲಿತ ಸಂಘಟನೆಗಳ ಮುಖಂಡರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸುನಿಲ್ ಕುಮಾರ್ ,ಧರ್ಮ ರಾಜ್ ,ಚಂದ್ರು, ನವೀನ್ ,ಸಿದ್ದೇಶ್ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು