Categories: ಹಾಸನ

ಸ್ವಚ್ಛ ನಗರ ಧ್ಯೇಯ: ಕ್ಲಿಯರಿನ್ ಸಂಸ್ಥೆ ಜೂ.೫ ರಂದು ಉದ್ಘಾಟನೆ

ಹಾಸನ: ಸ್ವಚ್ಛತೆ ಹಾಗೂ ಪರಿಸರ ಕಾಳಜಿ ಹೊಂದಿರುವ ಕ್ಲಿಯರಿನ್ ಸಂಸ್ಥೆ ಉದ್ಘಾಟನೆ ಕಾರ್ಯಕ್ರಮ ಜೂನ್ ೫ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ ಚಂದ್ರಶೇಖರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ವಚ್ಛ ಪರಿಸರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕಟ್ಟಲಾಗಿರುವ ಕ್ಲಿಯರಿನ್ ಸಂಸ್ಥೆ ವಿಶ್ವ ಪರಿಸರ ದಿನಾಚರ ಣೆಯಂದು ನಗರದ ತನ್ವಿತ್ರಿಶ ಕಲ್ಯಾಣ ಮಂಟಪದ ಹಿಂಭಾಗ ಉದ್ಘಾಟನಾ ಕಾರ್ಯಕ್ರಮ ನಡೆ ಯಲಿದ್ದು, ನಗರದ ಶ್ರೀ ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಬುನಾಥ ಸ್ವಾಮೀಜಿ, ಪುಷ್ಪಗಿರಿ ಮಠದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ , ಕ್ಷೇತ್ರದ ಶಾಸಕರಾದ ಸ್ವರೂಪ ಪ್ರಕಾಶ್ ಅವರ ಸೇರಿ ದಂತೆ ಇತರ ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು.

ನನ್ನ ಕಸ ನನ್ನ ಜವಾಬ್ದಾರಿ ಎಂಬ ಅಭಿಯಾನವನ್ನು ನಮ್ಮ ಸಂಸ್ಥೆಯಿಂದ ಆರಂಭಿಸಿ ನಗರದ ಸಾರ್ವಜನಿಕರಲ್ಲಿ ಸ್ವಚ್ಛ ಪರಿಸರದ ಬಗ್ಗೆ ಜಾಗೃತಿಯನ್ನು ಮೂಡಿಸಲಾ ಗುತ್ತಿದೆ. ಸಂಸ್ಥೆಯಿಂದ ಕಾಂಪೋಸ್ಟ್ ತಯಾರಿಕೆ, ವೇಸ್ಟ್ ಪ್ಲಾಸ್ಟಿಕ್ ಸಂಗ್ರ ಹಿಸಿ ಇತರೆ ವಸ್ತುಗಳ ತಯಾರಿಕೆ ಬಗ್ಗೆಯೂ ಹೆಚ್ಚಿನ ನಿಗವಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಇತ್ತೀಚಿಗೆ ಆರ್ ಆರ್ ಆರ್ ಘಟಕವನ್ನು ತೆರೆದು ನಗರವನ್ನು ಸ್ವಚ್ಛವಾಗಿ ಇಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತದೆ ಎಂದರು.

ಮುಂದಿನ ದಿನಗಳಲ್ಲಿ ಶಾಲೆ, ಕಾಲೇಜು, ಹಾಸ್ಪಿಟಲ್ ಕಲ್ಯಾಣ ಮಂಟಪ ಸೇರಿದಂತೆ ಇತರೆ ಸ್ಥಳದಲ್ಲಿಯೂ ವೆಸ್ಟ್ ಮ್ಯಾನೇಜ್ಮೆಂಟ್ ಹಾಗೂ ಇತರೆ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದು ಹೇಳಿದರು.

ವೃತ್ತಿಯೊಂದಿಗೆ ಪ್ರವೃತ್ತಿಯಾಗಿ ಈ ರೀತಿಯ ಸಂಸ್ಥೆಯನ್ನು ಸ್ಥಾಪಿಸಿ ಹಾಸನವನ್ನು ಸ್ವಚ್ಛ ನಗರನ್ನಾಗಿ ಮಾಡುವ ಗುರಿಯೊಂದಿಗೆ ಮುನ್ನಡೆಯುತ್ತಿದ್ದು ಸಾರ್ವಜನಿಕರ ಸಹಕಾರವು ಅತ್ಯಗತ್ಯ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಗೋಪಾಲಕೃಷ್ಣ, ಶ್ರೀನಿವಾಸ ಶಾಸ್ತ್ರಿ, ಮಮತಾ ಪಾಟೀಲ್, ಮದನ ಕುಮಾರ್ ಇದ್ದರು.

Gayathri SG

Recent Posts

ಕಾಂಗ್ರೆಸ್‍ ನ ಗ್ಯಾರಂಟಿ ಜನರನ್ನು ರಕ್ಷಿಸುತ್ತಿದೆ: ಡಿಕೆಶಿ

ರಾಜ್ಯದಲ್ಲಿ ಜನ ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಯಿಂದ ಬದುಕುತ್ತಿದ್ದಾರೆ. ನಮ್ಮ ಗ್ಯಾರಂಟಿ ಜನರನ್ನು ರಕ್ಷಿಸುತ್ತಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

12 mins ago

ರಕ್ಷಿತ್ ಶೆಟ್ಟಿ ಅಭಿನಯದ `777 ಚಾರ್ಲಿ’ ಚಿತ್ರ ಇದೀಗ ಜಪಾನಿನಲ್ಲಿ ಬಿಡುಗಡೆಗೆ ಸಿದ್ಧ

ಪರಂವಃ ಸ್ಟುಡಿಯೋಸ್ ನಿರ್ಮಾಣದ, ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ ಅಭಿನಯದ `777 ಚಾರ್ಲಿ’ ಚಿತ್ರ ಇದೀಗ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ.…

49 mins ago

ರೈತರಿಗಾಗಿ ಹಣ ಕೇಳಿದ್ದು, ಗ್ಯಾರಂಟಿಗಾಗಿ ಹಣ ಕೇಳಿಲ್ಲ, ಕೇಳುವುದು ಇಲ್ಲ : ಸಿಎಂ

ರೈತರಿಗಾಗಿ ಹಣ ಕೇಳಿದ್ದು, ಗ್ಯಾರಂಟಿಗಾಗಿ ಹಣ ಕೇಳಿಲ್ಲ ಮತ್ತು ಕೇಳುವುದು ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ…

1 hour ago

ತಂದೆ ಕಿರುಕುಳಕ್ಕೆ ಬೇಸತ್ತು ತಾಯಿ ಆತ್ಮಹತ್ಯೆಗೆ ಯತ್ನ: ಪ್ರಾಣ ಉಳಿಸಿದ 7 ವರ್ಷದ ಬಾಲಕಿ

ಅಪ್ಪನ ದೌರ್ಜನ್ಯಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ತಾಯಿಯನ್ನು ಏಳು ವರ್ಷದ ಬಾಲಕಿಯೊಬ್ಬಳು ಕಾಪಾಡಿದ ಘಟನೆ ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದಿದೆ.

2 hours ago

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ದುಷ್ಕರ್ಮಿಗಳ ಗುಂಡಿಗೆ ಬಲಿ

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ರನ್ನು ಬಾಗ್ದಾದ್‌ನ ಜೊಯೌನಾ ಜಿಲ್ಲೆಯಲ್ಲಿ ತಡ ರಾತ್ರಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.  

2 hours ago

ತೆಕ್ಕಟ್ಟೆ: ಇನ್ನೋವಾ ಕಾರು ಮರಕ್ಕೆ ಡಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ…

3 hours ago