Categories: ಹಾಸನ

ಕುಡಿಯುವ ನೀರಿಲ್ಲದೆ ಪರದಾಟ; ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಬೇಲೂರು: ತಾಲೂಕಿನ ಚಟಚಟನಹಳ್ಳಿ ಗ್ರಾಪಂ ವ್ಯಾಪ್ತೀಯ ನಾಗರಾಜಪುರ ಗ್ರಾಮದಲ್ಲಿ ಸುಮಾರು ೫ ತಿಂಗಳಿಂದ ಕುಡಿಯುವ ನೀರಿಗೆ ಹಾಹಾಕಾರ ಇದ್ದರೂ ಸಹ ಯಾವುದೇ ಜನಪ್ರತಿನಿಧಿಗಳಾಗಲಿ ಹಾಗೂ ತಾಲೂಕು ಆಡಳಿತಾಧಿಕಾರಿಗಳಾಗಲಿ ಗಮನ ಹರಿಸದೆ ಇರುವುದರಿಂದ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ನೀರು ಕೊಡಿ ಇಲ್ಲದಿದ್ದರೆ ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಖಾಲಿ ಕೊಡ ಹಾಗೂ ಗುರುತಿನ ಚೀಟಿ ಹಿಡಿದು ಪ್ರತಿಭಟನೆ ಮಾಡಿದರು.

ಈ ವೇಳೆ ಮಾತನಾಡಿದ ಗ್ರಾಮದ ಮುಖಂಡ ಪರಮೇಶ್ ನಮ್ಮ ನಾಗರಾಜಪುರ ಗ್ರಾಮದಲ್ಲಿ ೧೫೦ ಭೋವಿ ಜನಾಂಗದ ಕುಟುಂಬಗಳಿದ್ದು ಇಲ್ಲಿ ಇರುವಂತಹ ಎರಡೇ ಎರಡು ಕೊಳವೆ ಬಾವಿಗಳಿದ್ದರೂ ಸಹ ಅದರಲ್ಲಿ ನೀರು ಬರದೆ ಸಂಪೂರ್ಣವಾಗಿ ನಿಂತುಹೋಗಿದೆ.

ನಾವುಗಳು ತಾಲೂಕು ಆಡಳಿತಕ್ಕೆ ಹಾಗೂ ಗ್ರಾಪಂ ಅಧ್ಯಕ್ಷರಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಎಷ್ಟೇ ಮನವಿ ಮಾಡಿದರು ಸಹ ಇದರ ಬಗ್ಗೆ ಗಮನ ಹರಿಸಿಲ್ಲ. ನಮ್ಮ ಸಮಸ್ಯೆಯನ್ನು ಕೇಳಲು ಸಹ ಯಾರೂ ಬಂದಿಲ್ಲ.

ಅದಕ್ಕಾಗಿ ನಮ್ಮ ಇಡೀ ಗ್ರಾಮದ ಜನರು ಗ್ರಾಪಂ ಮುಂಭಾಗದಲ್ಲಿ ಖಾಲಿ ಕೊಡ ಹಿಡಿದು ಪ್ರತಿಭಟನೆ ಮಾಡುತ್ತಿದ್ದೇವೆ. ಇದಕ್ಕೂ ಬಗ್ಗದಿದ್ದರೆ ನಮ್ಮ ಸಮಸ್ಯೆಯನ್ನು ಬಗೆಹರಿಸದಿದ್ದರೆ ನಮ್ಮ ಗ್ರಾಮದ ಯಾರೊಬ್ಬರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡದೆ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದಲ್ಲದೆ ಕೇವಲ ಸುಳ್ಳು ಆಶ್ವಾಸನೆ ಭರವಸೆ ನೀಡುವುದು ನಮಗೆ ಬೇಕಿಲ್ಲ.

ನಾವೇ ಒಂದು ತಿಂಗಳಿನಿಂದ ಟ್ಯಾಂಕರ್ ಗಳ ಮೂಲಕ ನೀರನ್ನು ತಂದು ನಮ್ಮ ಗ್ರಾಮಕ್ಕೆ ನೀಡುತ್ತಿದ್ದೇವೆ ಎಂದು ಅಧಿಕಾರಿಗಳ ವಿರುದ್ಧ ಹಾಗೂ ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರ ಕೂಗಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ವೆಂಕಟೇಶ್, ಪ್ರಕಾಶ್, ಸೋಮು, ಲೊಕೇಶ್, ಗಂಗಾ, ನೇತ್ರಾ, ಗಂಗಮ್ಮ, ವೆಂಕಮ್ಮ, ಚಿಕ್ಕಮ್ಮ ಇತರರು ಹಾಜರಿದ್ದರು.

Chaitra Kulal

Recent Posts

ಕರ್ನಾಟಕದ ಎಲ್ಲಾ ಭಾಷೆಗಳಲ್ಲಿಯೇ ವೈಶಿಷ್ಟ್ಯ ಪಡೆದ ಲಂಬಾಣಿ ಭಾಷೆ

ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…

8 mins ago

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

25 mins ago

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

36 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

51 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

1 hour ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

2 hours ago