News Karnataka Kannada
Thursday, May 02 2024
ಹಾಸನ

ಬಿಜೆಪಿ ಜೊತೆ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದ ಹೆಚ್​ಡಿ ದೇವೇಗೌಡ

we should work together with BJP
Photo Credit : News Kannada

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರ ಕಟ್ಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ, ಬಿಜೆಪಿ ಜೊತೆ ಒಗ್ಗಟ್ಟಾಗಿ ಕೆಲಸ ಮಾಡಿ ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕು. ಬಿಜೆಪಿ ಜೊತೆ ಸೇರಿ ಕಾಂಗ್ರೆಸ್ ವಿರುದ್ಧ ಹೋರಾಡಬೇಕು ಎಂದರು.

ಈಗಿನ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ  ಅವರ ಕೈಯನ್ನು ನಾವು ಬಲಪಡಿಸಬೇಕಿದೆ. ಪಂಚ ರಾಜ್ಯಗಳ ಚುನಾವಣೆಯ ಎಕ್ಸಿಟ್ ಪೋಲ್ ರಿಪೋರ್ಟ್ ಬಂದಿದೆ. ಒಂದೆರಡು ಕಡೆ ಕಾಂಗ್ರೆಸ್, ಒಂದೆರಡು ಕಡೆ ಬಿಜೆಪಿ ಎಂದು ಸಮೀಕ್ಷೆ ಫಲಿತಾಂಶ ತಿಳಿಸಿದೆ. ವಿಧಾನಸಭಾ ಚುನಾವಣೆ ಲೋಕಸಭೆ ಮೇಲೆ ಪರಿಣಾಮ ಬೀರುವುದಿಲ್ಲ. ಇದು ನನ್ನ ರಾಜಕೀಯ ಅನುಭವದಲ್ಲಿ ಹೇಳುತ್ತಿದ್ದೇನೆ ಎಂದು ದೇವೇಗೌಡರು ಹೇಳಿದರು.

ಕೊನೆ ಕ್ಷಣದಲ್ಲಿ ಗ್ಯಾರಂಟಿ ಯೋಜನೆಯಿಂದಾಗಿ ಕಾಂಗ್ರೆಸ್ ಅಧಿಕಾರ ಹಿಡಿಯಿತು. ಈಗ ದೇಶದ ಎಲ್ಲಾ ಕಡೆಯೂ ಗ್ಯಾರಂಟಿ ಶುರುವಾಗಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ನಾನು ಈಗ ಹೆಚ್ಚು ಮಾತನಾಡುವುದಿಲ್ಲ ಎಂದು ಅವರು ಹೇಳಿದರು.

ಮುಂದಿನ ಲೋಕಸಭೆಯಲ್ಲಿ ನಮಗೆ ಎಷ್ಟು ಸೀಟು ಹಂಚಿಕೆಯಾಗಲಿದೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಪ್ರಧಾನಿ, ಬಿಜೆಪಿ ಅಧ್ಯಕ್ಷಕರು, ಹೆಚ್​ಡಿಕೆ ತೀರ್ಮಾನ ಮಾಡಲಿದ್ದಾರೆ ಎಂದು ದೇವೇಗೌಡರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು