Categories: ಹಾಸನ

ಪ್ರೀತಿಸುವಂತೆ ಕಿರುಕುಳ; ಮನನೊಂದು ಯುವತಿ ನೇಣಿಗೆ ಶರಣು

ಹಾಸನ: ಪ್ರೀತಿಸುವಂತೆ ನಿರಂತರ ಕಿರುಕುಳ ನೀಡಿದ್ದಕ್ಕೆ ಮನನೊಂದು ಯುವತಿ ನೇಣಿಗೆ ಶರಣಾದ ಘಟನೆ ಬೇಲೂರಿನ ನಿಡಗೂಡು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಜಯಣ್ಣ ಎಂಬವರ ಪುತ್ರಿ ಸಂಗೀತಾ (21) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಅದೇ ಗ್ರಾಮದ ಹೊನ್ನಯ್ಯ ಎಂಬವರ ಪುತ್ರ ಶಿವು ಎಂಬಾತ ಸಂಗೀತಾಳನ್ನು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡು ಓಡಾಡುತ್ತಿದ್ದ. ಅಲ್ಲದೇ ತನಗೆ ಯುವತಿಯನ್ನು ಮದುವೆ ಮಾಡಿಕೊಡುವಂತೆ ಸಂಗೀತಾ ಪೋಷಕರಲ್ಲಿ ಕೇಳಿದ್ದ. ಇದಕ್ಕೆ ಸಂಗೀತಾ ಮನೆಯವರು ಈಗಲೇ ಮದುವೆ ಮಾಡುವುದಿಲ್ಲ ಎಂದು ತಿಳಿಸಿದ್ದರು. ಇಷ್ಟಾದರೂ ಶಿವು, ಸಂಗೀತಾಳಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ.

ಜ.11 ರಂದು ಬೇಲೂರಿನ ಅಯ್ಯಪ್ಪಸ್ವಾಮಿ ದೆವಸ್ಥಾನಕ್ಕೆ ಸಂಗೀತಾ ಹೋಗಿದ್ದಳು. ಈ ವೇಳೆ ಅಲ್ಲಿಗೆ ಬಂದ ಶಿವು, ಯುವತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ನಾನು ಫೋನ್ ಮಾಡಿದರೂ ಏಕೆ ರಿಸೀವ್ ಮಾಡುವುದಿಲ್ಲ ಎಂದು ತಲೆಗೆ ಹೊಡೆದಿದ್ದಾನೆ. ನಂತರ ನನ್ನನ್ನು ಪ್ರೀತಿ ಮಾಡುವುದಿಲ್ಲವೆಂದರೆ ನಿನ್ನನ್ನು ಕೊಲೆ ಮಾಡುತ್ತೇನೆ ಎಂದು ಬೆದರಿಸಿ, ಫೋನ್ ಮಾಡಿದಾಗ ರಿಸೀವ್ ಮಾಡಬೇಕೆಂದು ವಾನಿರ್ಂಗ್ ಮಾಡಿದ್ದಾನೆ. ನನ್ನನ್ನು ಮದುವೆಯಾಗಲಿಲ್ಲ ಎಂದರೆ ನೀನು ಸತ್ತುಹೋಗು ಎಂದು ಜನರ ಎದುರೇ ಅವಮಾನ ಮಾಡಿ ಹೋಗಿದ್ದ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ.

Ramya Bolantoor

Recent Posts

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

3 mins ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

19 mins ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

39 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

1 hour ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

1 hour ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

1 hour ago