News Karnataka Kannada
Monday, May 06 2024
ಹಾಸನ

ಚಿರತೆ ಸೆರೆ ಹಿಡಿದು ಬೈಕ್‌ನಲ್ಲಿ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಗೆ ಒಪ್ಪಿಸಿದ ಯುವಕ

Youth captures leopard, bundles it on bike, hands it over to forest department
Photo Credit : News Kannada

ಹಾಸನ: ಯುವಕನೊಬ್ಬ ಚಿರತೆಯನ್ನೇ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆಯೊಂದು ಹಾಸನದಲ್ಲಿ ನಡೆದಿದೆ.

ವೇಣುಗೋಪಾಲ್ ಅಲಿಯಾಸ್ ಮುತ್ತು ಚಿರತೆ ಹಿಡಿದ ಯುವಕ. ಈತ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿ ಬಾಗಿವಾಳು ಗ್ರಾಮದಲ್ಲಿ ಚಿರತೆ ಸೆರೆ ಹಿಡಿದು ತನ್ನ ಬೈಕ್‌ನಲ್ಲಿ ಕಟ್ಟಿಕೊಂಡು ಓಡಾಡಿದ್ದಾನೆ.

ಮುತ್ತು ಎಂದಿನಂತೆ ಬೆಳಗ್ಗೆ ತಮ್ಮ ಜಮೀನಿಗೆ ಹೋಗಿದ್ದ ವೇಳೆ ಚಿರತೆ ಕಾಣಿಸಿಕೊಂಡಿದೆ. ಈ ವೇಳೆ ಆತ ಹರಸಾಹಸಪಟ್ಟು ಚಿರತೆ ಸೆರೆ ಹಿಡಿದಿದ್ದಾನೆ. ಬಳಿಕ ಬೈಕ್ ನಲ್ಲಿ ಕಟ್ಟಿಕೊಂಡು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾನೆ. ಚಿರತೆ ಹಿಡಿದ ವೇಳೆ ಮುತ್ತು ಕೈಗೆ ತರಚಿದ ಗಾಯಗಳಾಗಿವೆ. ಸದ್ಯ ಚಿರತೆಗೆ ಗಂಡಸಿ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಡಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು