ಮೈಸೂರು : ಟಿಪ್ಪರ್, ಟಾಟಾ ಏಸ್ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಹೆಚ್ ಡಿ ಕೋಟೆ ರಸ್ತೆಯ ಗುಜ್ಜೆಗೌಡನಪುರ ಬಳಿ ನಡೆದಿದೆ.
ಟಾಟಾ ಏಸ್ ಗಾಡಿಯಲ್ಲಿ ಸಂಚರಿಸುತ್ತಿದ್ದವರಿಗೆ ಗಂಭೀರ ಗಾಯವಾಗಿದೆ. ಮೈಸೂರಿನಲ್ಲಿ ನಡೆಯುತ್ತಿರುವ ಬಸವ ಜಯಂತಿಗೆ ಆಗಮಿಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ಗಾಯಾಳುಗಳು ಹೆಚ್ ಡಿ ಕೋಟೆ ತಾಲೂಕಿನ ಕಟ್ಟೆ ಮನುಗನಹಳ್ಳಿ ಗ್ರಾಮಸ್ಥರಾಗಿದ್ದಾರೆ. ಕೆ ಆರ್ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಪುಟ್ಟ ಮಕ್ಕಳು ಸೇರಿ ಹಲವರಿಗೆ ಗಂಭೀರ ಗಾಯಗಳಾಗಿದೆ.

