Bengaluru 22°C
Ad

ನಂಜನಗೂಡಿನಲ್ಲಿ ಮುಂದುವರಿದ ವರುಣನ ಆರ್ಭಟ : 10ಕ್ಕೂ ಹೆಚ್ಚು ಮನೆಗಳು ಜಲಾವೃತ

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಸುಮಾರು ಹತ್ತಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ.

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಸುಮಾರು ಹತ್ತಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ರಾತ್ರಿ ಸುರಿದ ಧಾರಾಕಾರ ಮಳೆಗೆ ನಂಜನಗೂಡಿನ ಹುಲ್ಲಹಳ್ಳಿ ಮುಖ್ಯ ರಸ್ತೆಯಲ್ಲಿರುವ 22ನೇ ವಾರ್ಡಿನ ಚನ್ನಪ್ಪ ಲೇಔಟ್ ಮತ್ತು ನಟರಾಜ ಲೇಔಟ್ ನಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.

ಸುಮಾರು ನಾಲ್ಕು ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆಗೆ ನಗರದ ಹುಲ್ಲಹಳ್ಳಿ ಮುಖ್ಯರಸ್ತೆ ಮಳೆ ನೀರು ತುಂಬಿಕೊಂಡು ಕೆರೆಯಂತಾಗಿದ್ದು, ಸಂಚಾರಕ್ಕೆ ವಾಹನ ಸವಾರರು ಪರದಾಡುವಂತಾಗಿದೆ. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಕೊಳಚೆ ಚರಂಡಿ ನೀರು ಮತ್ತು ಮೀನುಗಳು ಮನೆಯೊಳಗೆ ಬಂದಿವೆ. ಇಡೀ ರಾತ್ರಿ ನಿವಾಸಿಗಳು ನಿದ್ರೆ ಇಲ್ಲದೆ ನೀರನ್ನು ಹೊರ ಚೆಲ್ಲುವುದಕ್ಕೆ ಹರಸಾಹಸ ಪಡುವಂತಾಗಿದೆ. ಮನೆಯೊಳಗೆ ನೀರು ನುಗ್ಗಿದ ಪರಿಣಾಮ ದವಸ ಧಾನ್ಯಗಳು ಹಾನಿಯಾಗಿದೆ. ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಮನೆಗಳಿಗೆ ಮಳೆ ನೀರು ನುಗ್ಗುತ್ತಿದ್ದು ಕೂಡಲೇ ಚರಂಡಿ ವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Ad
Ad
Nk Channel Final 21 09 2023
Ad