ಮೈಸೂರು : ವೈಯನಾಡು ಸುತ್ತಮುತ್ತ ಬಿರುಸಾದ ಮಳೆ. ಹೆಚ್.ಡಿ.ಕೋಟೆ ತಾಲೂಕಿನ ತಾರಕ ಜಲಾಶಯ ಎರಡನೇ ಬಾರಿಗೆ ಭರ್ತಿಯಾಗಿದೆ. ನದಿ ಪಾತ್ರದ ಜನರಿಗೆ ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ.
ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ತಾರಕ ಜಲಾಶಯ ಗರಿಷ್ಠಮಟ್ಟ ತಲುಪುವ ಹಂತದಲ್ಲಿದೆ. ಯಾವುದೇ ಸಮಯದಲ್ಲಿ ಕ್ರಸ್ಟ್ ಗೇಟ್ಗಳ ಮೂಲಕ ನದಿಗೆ ನೀರನ್ನು ಹೊರಬಿಡುವ ಸಾಧ್ಯತೆ ಇದೆ.
ಸಾರ್ವಜನಿಕರು, ನದಿ ಪಾತ್ರದ ತಗ್ಗು ಪ್ರದೇಶದಲ್ಲಿ ಇರುವ ಆಸ್ತಿಪಾಸ್ತಿ, ಜಾನುವಾರು ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳ ಪ್ರಕಟಣೆ ತಿಳಿಸಲಾಗಿದೆ.

