Categories: ಮೈಸೂರು

ಎಸ್ ಡಿಎಮ್ಐಎಮ್ ಡಿ ಸಂಸ್ಥೆಗೆ ಹೀಲ್ಬ್ರಾನ್ ವಿವಿ ಅಧ್ಯಯನ ತಂಡ ಭೇಟಿ

ಮೈಸೂರು: ಮೈಸೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್ಸ್ಟಿಟ್ಯೂಟ್ ಫಾರ್ ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್ ಸಂಸ್ಥೆಯ ಜೊತೆ ವಿದ್ಯಾರ್ಥಿ ಹಾಗೂ ಅಧ್ಯಾಪಕ ವಿನಿಮಯ ಕಾರ್ಯಕ್ರಮ ಒಪ್ಪಂದ ಹೊಂದಿರುವ ಜರ್ಮನಿಯ ಹೀಲ್ಬ್ರಾನ್ ವಿಶ್ವವಿದ್ಯಾನಿಲಯ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಎಸ್ ಡಿ ಎಮ್ ಐಎಮ್ ಡಿ ಸಂಸ್ಥೆಗೆ ಆಗಮಿಸಿದರು.

ಜರ್ಮನಿ ಹೀಲ್ಬ್ರಾನ್ ವಿಶ್ವವಿದ್ಯಾನಿಲಯ ಮಾನವ ಸಂಪನ್ಮೂಲ ನಿರ್ವಹಣೆ, ಅಧ್ಯಾಪಕರು – ವ್ಯಾಪಾರ ಮತ್ತು ಸಾರಿಗೆ ನಿರ್ವಹಣೆ ಪ್ರಾಧ್ಯಾಪಕ ಡಾ. ಸುಜೇನ್ ವಿಲ್ಪರ್ಸ್, ಮತ್ತು ಕಾರ್ಯಕ್ರಮದ ಸಂಚಾಲಕ ಮಿಸ್. ಡೇಬಿ ಅವರೊಂದಿಗೆ 15 ವಿದ್ಯಾರ್ಥಿಗಳು ಫೆಬ್ರವರಿ 21 ರಿಂದ 28ರವರೆಗೆ ವಿನಿಮಯ ಪ್ರವಾಸದಲ್ಲಿ ಇರುತ್ತಾರೆ.

ಸಂಸ್ಥೆಯ ನಿರ್ದೇಶಕರಾದ ಡಾ. ಎನ್. ಆರ್. ಪರಶುರಾಮನ್, ಉಪನಿರ್ದೇಶಕರಾದ ಡಾ. ಎಸ್. ಎನ್. ಪ್ರಸಾದ್ ಆಗಮಿಸಿರುವ ಪ್ರತಿನಿಧಿಗಳನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ನಿರ್ದೇಶಕ ಡಾ. ಎನ್. ಆರ್. ಪರಶುರಾಮನ್, ಧರ್ಮಸ್ಥಳ ಟ್ರಸ್ಟ್ ಅನುಸರಿಸುತ್ತಿರುವ ಮೌಲ್ಯಗಳ ಬಗ್ಗೆ ಹೇಳಿದರು. ಅದೇ ನಿಟ್ಟಿನಲ್ಲಿ ಸಂಸ್ಥೆಯು ತನ್ನ ನಿರ್ವಹಣಾ ಶಿಕ್ಷಣದಲ್ಲಿ ಅಳವಡಿಸಿಕೊಂಡಿರುವ ಸಾಮಾಜಿಕ ಕಳಕಳಿ, ಸಾಮಾಜಿಕವಾಗಿ ಒಳಗೊಳ್ಳುವಿಕೆ, ವ್ಯಾಪಾರದಲ್ಲಿನ ನೀತಿಗಳು ಮತ್ತು ಕಾರ್ಪೊರೇಟ್ ಸ್ವಾಸ್ಥ್ಯದ ಬಗ್ಗೆ ವಿವರಿಸಿದರು.

ಆಗಮಿಸಿರುವ ಸಾಗರೋತ್ತರ ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ವೃಂದದವರು ಭಾರತೀಯ ವ್ಯಾಪಾರದ ವಾತಾವರಣದ ಬಗ್ಗೆ ತಿಳಿದುಕೊಳ್ಳಲಿದ್ದಾರೆ. ರಾಷ್ಟ್ರಗಳ ನಡುವಿನ ಅಡೆತಡೆಗಳನ್ನು ದೂರ ಮಾಡಿ, ಉತ್ತಮವಾದ ಶೈಕ್ಷಣಿಕ ಮತ್ತು ವ್ಯಾಪಾರದ ಸಂಬಂಧಗಳನ್ನು ಹೊಂದುವ ಬಗ್ಗೆ ಕಾರ್ಯಕ್ರಮವು ಗಮನಕೊಡಲಿದೆ. ಈ ಎಲ್ಲಾ ವಿಷಯಗಳನ್ನು ಕೇಂದ್ರವಾಗಿಟ್ಟುಕೊಂಡು ಸಂಸ್ಥೆಯು ಕಾರ್ಯಕ್ರಮವನ್ನು ರೂಪಿಸಿದ್ದು, ಅದರಲ್ಲಿ ತರಗತಿಗಳು, ಉದ್ಯಮಗಳಿಗೆ ಭೇಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ಭೇಟಿ, ಮೈಸೂರಿನ ಸುತ್ತಮುತ್ತ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನಡೆಯಲಿದೆ. ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿವೆ. ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮ 2023 ರ ಅಡಿಯಲ್ಲಿ ಬಂದಿರುವ ಅಧ್ಯಾಪಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಈ ಸ್ವಾಗತ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Umesha HS

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

4 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

5 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

5 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

6 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

7 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

7 hours ago