ಮೈಸೂರು : ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಬೆಂಗಳೂರಿನ ಲಕ್ಷ್ಮಿ ( 29) ಮೃತ ಮಹಿಳೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸಿ ರಾಜೇಶ್ ಪತ್ನಿ. ಮೂಲತಃ ಮಂಡ್ಯದ ಹೊಸಹಳ್ಳಿ ಗ್ರಾಮದ ನಿವಾಸಿ ರಾಜೇಶ್. ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದರು. ನಿನ್ನೆ ಮೈಸೂರಿನ ಬೆಳವಾಡಿಯ ಸಂಬಂಧಿಕರ ಮನೆಗೆ ಬಂದಿದ್ದರು.

ಮಕ್ಕಳಿಗೆ ರಜೆ ಇದ್ದ ಹಿನ್ನಲೆ ಅರಮನೆ ನೋಡಲಿಕ್ಕೆ ಬಂದಿದ್ರು. ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಲಕ್ಷ್ಮಿ ಸಾವನ್ನಪ್ಪಿದ್ದಾರೆ. ಹೊಟ್ಟೆಯಿಂದ ಕರುಳಿನ ಭಾಗ ಕಿತ್ತು ಬಂದಿತ್ತು. ತಲೆ, ಕೈ , ಕಾಲಿನ ಭಾಗ ಕೂಡ ಛಿದ್ರವಾಗಿತ್ತು.