Categories: ಮೈಸೂರು

ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಗೌರವ ಡಾಕ್ಟರೇಟ್‌

ಮೈಸೂರು: ಕರ್ನಾಟಕ ರಾಜ್ಯದ ಮುಕ್ತ ವಿಶ್ವವಿದ್ಯಾನಿಲಯದ 18ನೇ ವಾರ್ಷಿಕ ಘಟಿಕೋತ್ಸವದಲ್ಲಿ ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್‌ ಪದವಿ ಪ್ರಮಾಣ ಮಾಡಲಾಗುತ್ತಿದೆ.

ಮೈಸೂರಿನ ಮಾನಸಗಂಗೋತ್ರಿ ಆವರಣದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 18ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್‌ (ಡಿ.ಲಿಟ್‌) ಪ್ರದಾನ ಮಾಡಲಾಗುತ್ತಿದೆ. ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಎನ್. ರಾಮಚಂದ್ರಯ್ಯ, ಶ್ರೀ ವೆಂಕಟಲಕ್ಷ್ಮೀ ನರಸಿಂಹರಾಜು ಅವರಿಗೆ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಲಾಗುತ್ತಿದೆ ಎಂದು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರಣಪ್ಪ ಹಲಸೆ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ವಿಶ್ವವಿದ್ಯಾನಿಲಯದ ಘಟಿಕೋತ್ಸವ ಜುಲೈ 2ರ ಭಾನುವಾರ ನಡೆಯಲಿದೆ. ರಾಷ್ಟ್ರಪತಿ ಅವರನ್ನೂ ಆಹ್ವಾನಿಸಲಾಗಿದೆ. ಆ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಅವರು ಆಗಮಿಸದಿದ್ದರೆ ಜು.3ರಂದು ರಾಷ್ಟ್ರಪತಿ ಅವರು ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ರಾಜಭವನದಲ್ಲಿ ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಗುವುದು ಎಂದು ಕುಲಪತಿಗಳು ಮಾಹಿತಿ ನೀಡಿದರು.

Ashitha S

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

9 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

20 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

27 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

30 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

41 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

51 mins ago