ಮೈಸೂರು : ಮದ್ಯಪಾನ ಮಾಡಿ ರಸ್ತೆಯಲ್ಲಿ ಪುಂಡರ ಹುಚ್ಚಾಟ ಮೆರೆದಿದ್ದು, ಬಾರ್ ಮುಂಭಾಗದಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಣಸೂರಿನ ಬಜಾರ್ ರಸ್ತೆಯ ಅಲಂಕಾರ್ ಬಾರ್ ಎದುರು ನಡೆದಿದೆ.

ಕಿರಿಜಾಜಿ ಗ್ರಾಮದ ರಘು ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಯಲ್ಲಿ ರಘುಗೆ ಗಾಯವಾಗಿದ್ದು, ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲೆಯ ದೃಶ್ಯ ಸಮೀಪದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಸಿಟಿವಿ ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾದರು. ರಾತ್ರಿ ವೇಳೆ ಬಾರ್‌ಗಳ ಸುತ್ತಮುತ್ತ ಪೊಲೀಸ್ ಗಸ್ತು ಹೆಚ್ಚಿಸುವಂತೆ ಸ್ಥಳೀಯರು ಆಗ್ರಹಿಸಿದರು. ಸಾರ್ವಜನಿಕರಿಗೆ ತೊಂದರೆ ನೀಡುವ ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ಮಾಡಲಾಯಿತು.