Bengaluru 22°C

ಜಿಟಿ ಜಿಟಿ ಮಳೆಗೆ ಮನೆ ಗೋಡೆ ಕುಸಿತ; ಪ್ರಾಣಾಪಾಯದಿಂದ ಪಾರದ ಕುಟುಂಬಸ್ಥರು!

ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಕಳೆದ ಎರಡ್ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದಿದ್ದು ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಂಜನಗೂಡು: ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಕಳೆದ ಎರಡ್ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದಿದ್ದು ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಗ್ರಾಮದ ಮೋಸಿನಾ ಭಾನು ಎಂಬುವವರಿಗೆ ಸೇರಿದ ಮಣ್ಣಿನ ಮನೆಯಾಗಿದ್ದು, ತಡರಾತ್ರಿ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಮೇಲ್ಚಾವಣಿ ಮತ್ತು ಗೋಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಕುಟುಂಬಸ್ಥರು ಪಾರಾಗಿದ್ದಾರೆ.


ತಕ್ಷಣವೇ ಪಕ್ಕದ ಮನೆಯಲ್ಲಿ ಅಶ್ರಯ ಪಡೆದಿದ್ದಾರೆ. ಮನೆಯಲ್ಲಿದ್ದ ದವಸ ಧಾನ್ಯಗಳು, ಎಲೆಕ್ಟ್ರಾನಿಕ್ ಉಪಕರಣಗಳು ಸೇರಿದಂತೆ ಮನೆ ವಸ್ತುಗಳು ಹಾನಿಯಾಗಿದೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು, ಮನೆ ನಿರ್ಮಾಣ ಮಾಡಿಕೊಡಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.


Nk Channel Final 21 09 2023