ನಂಜನಗೂಡು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94 ರಷ್ಟು ಫಲಿತಾಂಶ ಬಂದಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ್ ಹೇಳಿದರು.

ವಾಣಿಜ್ಯ ವಿಭಾಗದಲ್ಲಿ ಸಹನಾ ಎಂಬ ವಿದ್ಯಾರ್ಥಿನಿಯೂ 600 ಅಂಕಗಳಿಗೆ 566 (ಶೇ.94) ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನದಲ್ಲಿದ್ದಾಳೆ. ಕನ್ನಡ, ಇಂಗ್ಲಿಷ್, ಅರ್ಥಶಾಸ್ತ್ರ, ಭೂಗೋಳಶಾಸ್ತ್ರ, ಲೆಕ್ಕಶಾಸ್ತ್ರದಲ್ಲಿ ನೂರರಷ್ಟು ಫಲಿತಾಂಶ ಬಂದಿದ್ದು, ಒಟ್ಟು 16 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಮೂವರು ವಿದ್ಯಾರ್ಥಿಗಳಿಗೆ ಅತ್ಯುನ್ನತ ಶ್ರೇಣಿ, ಏಳು ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, ಐದು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕಳೆದ ಸಾಲಿಗಿಂತ ಈ ವರ್ಷದ ಪರೀಕ್ಷಾ ಫಲಿತಾಂಶ ಅತ್ಯುತ್ತಮವಾಗಿದ್ದು, ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ್ ರವರು ಹರ್ಷ ವ್ಯಕ್ತಪಡಿಸಿದ್ದಾರೆ.

ಉಪನ್ಯಾಸಕರಾದ ನಾಗರತ್ನ, ಸುಶೀಲ, ಸುರೇಶ್, ಮನು, ಪ್ರೇಮಮ್ಮ, ಲಕ್ಷ್ಮಿ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ತಾಲ್ಲೂಕಿನಲ್ಲಿ ಅತಿ ಹೆಚ್ಚು ಫಲಿತಾಂಶವನ್ನು ಪಡೆದ ಸರ್ಕಾರಿ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ್ ತಿಳಿಸಿದ್ದಾರೆ.