ನಂಜನಗೂಡು: ದಕ್ಷಿಣ ಕಾಶಿ ಖ್ಯಾತಿಯ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ 2,46,28,418 ರೂ ಕಾಣಿಕೆ ಸಂಗ್ರಹವಾಗಿದೆ.

ದೇವಾಲಯದ ದಾಸೋಹ ಭವನದ ಆವರಣದಲ್ಲಿ ನಡೆದ ಎಣಿಕೆ ಕಾರ್ಯದಲ್ಲಿ ದೇವಸ್ಥಾನದ ಮುಖ್ಯ ಕಾರ್ಯನಿರ್ವಣಧಿಕಾರಿ ಕೃಷ್ಣರವರ ನೇತೃತ್ವದಲ್ಲಿ ನಡೆದ ಎಣಿಕೆ ಕಾರ್ಯದಲ್ಲಿ ಕಾಣಿಕೆ ಜೊತೆಗೆ 50 ಚಿನ್ನ, 2 ಕೆಜಿ ಬೆಳ್ಳಿ, 120 ವಿದೇಶಿ ಕರೆನ್ಸಿಗಳು ಭಕ್ತಾದಿಗಳ ಕಾಣಿಕೆ ರೂಪದಲ್ಲಿ ಬಂದಿವೆ.

ಹುಂಡಿ ಎಣಿಕೆ ಕಾರ್ಯದಲ್ಲಿ ಸುಮಾರು 50 ಕ್ಕೂ ಹೆಚ್ಚು ದೇವಾಲಯದ ಸಿಬ್ಬಂದಿಗಳು ಹಾಗೂ ಮಹಿಳಾ ಸ್ವಸಹಾಯ ಸಂಘದ ಮಹಿಳೆಯರು ಕೆನರಾ ಬ್ಯಾಂಕ್ ಸಿಬ್ಬಂದಿಗಳು ಭಾಗವಹಿಸಿದ್ದರು.