ಮೈಸೂರು : ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾಶ್ಮೀರದ ಘಟನೆ ಖಂಡಿಸಿ ಶ್ರದ್ಧಾಂಜಲಿ ಸಲ್ಲಿಸಿ ಎಂದು ಹೇಳಿದ್ದೇನೆ ಎಂದು ಮೈಸೂರಿನಲ್ಲಿ ಡಿಸಿಎಂ ಡಿಕೆಶಿ ಹೇಳಿಕೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಹೇಳಿದ್ದೇನೆ. ಈ ಘಟನೆಯನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ನಾವು ಈ ದೇಶದ ಐಕ್ಯತೆ ಶಾಂತಿ ಕಾಪಾಡಲು ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇವೆ. ಈ ಬಾರಿ ದಸರಾದಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಿದ್ದೇವೆ. ದಸರಾದಲ್ಲಿ ಕಂಬಳ ಸೇರಿಸುತ್ತೇವೆ ಎಂದರು.
ಕೆಲ ಹೊಸ ಆಚರಣೆಗಳನ್ನು ಸೇರಿಸಬೇಕು. ಹಳೆಯ ಪದ್ಧತಿ ಜೊತೆಗೆ ಹೊಸ ಆಚರಣೆಗಳು ದಸರಾ ಮೆರಗನ್ನು ಹೆಚ್ಚು ಮಾಡುತ್ತವೆ. ಈ ಬಗ್ಗೆ ಅಧಿಕಾರಿಗಳ ಚರ್ಚೆ ಮಾಡಿದ್ದೇವೆ. ಈ ಬಾರಿ ದಸರಾದಲ್ಲಿ ಅನೇಕ ಬದಲಾವಣೆ ಆಗತ್ತೆ. ಮೈಸೂರಿನಲ್ಲಿ ಡಿಸಿಎಂ ಡಿಕೆಶಿ ಹೇಳಿಕೆ ನೀಡಿದರು.

