Bengaluru 22°C
Ad

ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು: ಸಿಎಂ ಸಿದ್ದರಾಮಯ್ಯ

ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಆ ಹುಡುಗಿ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು: ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಆ ಹುಡುಗಿ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್‌ಸೈಟ್ ಉದ್ಘಾಟಿಸಿ ಮಾತನಾಡಿದ ಅವರು, ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ ಎಂದು  ಅಭಿಪ್ರಾಯಪಟ್ಟರು.

ಜೊತೆಗೆ ತಮ್ಮ ಕಾಲೇಜು ದಿನಗಳನ್ನು ಸ್ಮರಿಸಿದ  ಮುಖ್ಯಮಂತ್ರಿಗಳು ತಮ್ಮ ಕಾಲೇಜು ದಿನದ ಹುಡುಗಿಯೊಂದಿಗಿನ ಸ್ನೇಹದ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

ನಮ್ಮ ಸರ್ಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ ಎಂದ ಅವರು, ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.

ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮಾಜದಲ್ಲಿ ಚಲನೆಯುಂಟಾಗುತ್ತದೆ. ಸಮ ಸಮಾಜದ ಆಶಯ ಈಡೇರಲು, ಜಾತಿ ನಾಶವಾಗಲು ಸಾಧ್ಯ ಎಂದು ಹೇಳಿದರು.

Ad
Ad
Nk Channel Final 21 09 2023
Ad