ಮೈಸೂರು : ಮುಖ್ಯಮಂತ್ರಿಯಾಗಿ ಇನ್ನೂ ಎರಡೂವರೆ ವರ್ಷ ಇರುತ್ತೇನೆ. ಮುಂದಿನ ವರ್ಷವೂ ನಾನೇ ಯಾಕೆ ಪುಷ್ಪಾರ್ಚನೆ ಮಾಡಬಾರದು. ಇಷ್ಟು ವರ್ಷ ಮಾಡಿಕೊಂಡು ಬಂದಿದ್ದೇನೆ. ಐ ಹೋಪ್ ಮಾಡುತ್ತೇನೆ‌ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.

ಎರಡನೇ ಭಾರಿ ಸಿಎಂ‌ ಆಗಲ್ಲ ಅಂದಿದ್ದರು. ಸಿಎಂ‌ ಕೂಡ ಆಗಿದ್ದೇನೆ. ಬಹಳ ಜನ ಬಹಳಷ್ಟು ಹೇಳುತ್ತಾರೆ, ಹೇಳಲಿ. ನವೆಂಬರಿನಲ್ಲಿ ಸರ್ಕಾರಕ್ಕೆ ಎರಡು ವರ್ಷ ತುಂಬುವ ಕಾರಣ ಆ ರೀತಿ ಮಾತನಾಡುತ್ತಾರೆ. ಹೈ ಕಮಾಂಡ್ ತೀರ್ಮಾನ ಎಲ್ಲರೂ ಬದ್ಧರಾಗಿರಬೇಕು. ಹೈ ಕಮಾಂಡ್ ಹೇಳಿದಂತೆ ಕೇಳಬೇಕು. ಬಿಜೆಪಿಗೆ ವಸ್ತು ಸ್ಥಿತಿ ಗೊತ್ತಿಲ್ಲ. ಅವರು ಹೇಳಿದ ಏನು ನಡೆಯುವುದಿಲ್ಲ. ಬಿಜೆಪಿ ಭವಿಷ್ಯಕಾರರಲ್ಲ. ಬಿಜೆಪಿ ಹೇಳಿದ್ದೆಲ್ಲಾ ಸುಳ್ಳಾಗಿದೆ ಎಂದರು.