Ad

ʼಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆʼ

ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ ಡಿಕೆ ಶಿವಕುಮಾರ್ ಆಗುತ್ತಾರೆ ಎಂದು ಶಾಸಕ ಜಿಟಿ ದೇವೇಗೌಡ ಹೇಳಿದ್ದಾರೆ.

ಮೈಸೂರು: ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ ಡಿಕೆ ಶಿವಕುಮಾರ್ ಆಗುತ್ತಾರೆ ಎಂದು ಶಾಸಕ ಜಿಟಿ ದೇವೇಗೌಡ ಹೇಳಿದ್ದಾರೆ.

Ad
300x250 2

ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಹಿಂದೆ ಕಾಂಗ್ರೆಸ್ ವೀಕ್ ಆಗಿತ್ತು, ಅವಾಗ ಸಿದ್ದರಾಮಯ್ಯ ಸ್ಟ್ರಾಂಗ್ ಆಗಿದ್ದರು. ಸದ್ಯ ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಇದ್ದಾರೆ. ಸಿದ್ದರಾಮಯ್ಯ ಕೂಡ ಹೈಕಮಾಂಡ್ ಹೇಳಿದರೆ ಅಂಥ ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ.

ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಹೇಳಿಲ್ಲ, ಅವರ ಶಾಸಕರೂ ಕೂಡ ಹೇಳಿಲ್ಲ. ಒಕ್ಕಲಿಗ ಸ್ವಾಮೀಜಿಗಳು ಬಹಿರಂಗವಾಗಿ ಒಂದು ಮನವಿ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಮೇಲಿನ ಅಭಿಮಾನದಿಂದ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಕುರುಬ ಸಮುದಾಯದ ಸ್ವಾಮೀಜಿ ದೊಡ್ಡ ಘರ್ಜನೆ ಮಾಡಲಿಲ್ವಾ ಎಂದು ಪ್ರಶ್ನಿಸಿದರು.

 

 

 

Ad
Ad
Nk Channel Final 21 09 2023
Ad