ಮೈಸೂರು : ಹಳ್ಳಿಯ ಗೂಡಂಗಡಿಗಳಲ್ಲಿ ಅಕ್ರಮ ಮದ್ಯಮಾರಾಟ ನಂಜನಗೂಡು ಭಾಗದಲ್ಲಿ ಹೆಚ್ಚಾಗಿದೆ. ಚಿಲ್ಲರೆ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುವವರ ವಿರುದ್ಧ ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕಳೆದ ಎರಡು ತಿಂಗಳಲ್ಲಿ ಇಬ್ಬರು ಅಕ್ರಮ ಮದ್ಯ ಸೇವಿಸಿ ಸಾವನ್ನಪ್ಪಿದ್ದರು. ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಬಳಿ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಯತೀಂದ್ರ ಸಿದ್ದರಾಮಯ್ಯ ತರಾಟೆ ತೆಗೆದುಕೊಂಡಿದ್ದಾರೆ.

ತಕ್ಷಣ ನಿಲ್ಲಿಸದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವ ಎಚ್ಚರಿಕೆ ವಹಿಸಲಾಗಿದೆ. ಇದೇ ವೇಳೆ ಕುಡಿಯುವ ನೀರು, ಅಕ್ರಮ- ಸಕ್ರಮ ಕುರಿತು ಮನವಿ ಸಲ್ಲಿಕೆ ಮಾಡಲಾಯಿತು. ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಆಗಬೇಕು ಇಲ್ಲವಾದರೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.