Bengaluru 22°C
Ad

ನ್ಯೂಸ್ ಕರ್ನಾಟಕ ವರದಿಯ ಇಂಪ್ಯಾಕ್ಟ್; ಸತ್ತವರ ಹೆಸರಿಗೆ ಮನೆ ಬಿಲ್ ಪಾವತಿ ಮಾಡಿದ‌ ಕೇಸ್, ಅಧಿಕಾರಿಗಳ ಭೇಟಿ

ಬಸವ ವಸತಿ ಯೋಜನೆಯಡಿಯಲ್ಲಿ ಫಲಾನುಭವಿ ಮೃತಪಟ್ಟು ಮೂರು ವರ್ಷಗಳು ಕಳೆದ ನಂತರ ಅವರ ಖಾತೆಗೆ ಮನೆಯ ಬಿಲ್ ಪಾವತಿ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮ ಪಂಚಾಯಿತಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ನಂಜನಗೂಡು: ಬಸವ ವಸತಿ ಯೋಜನೆಯಡಿಯಲ್ಲಿ ಫಲಾನುಭವಿ ಮೃತಪಟ್ಟು ಮೂರು ವರ್ಷಗಳು ಕಳೆದ ನಂತರ ಅವರ ಖಾತೆಗೆ ಮನೆಯ ಬಿಲ್ ಪಾವತಿ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮ ಪಂಚಾಯಿತಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

Ad
300x250 2

ಇದು ನ್ಯೂಸ್ ಕರ್ನಾಟಕ ವರದಿಯ ಬಿಗ್ ಇಂಪ್ಯಾಕ್ಟ್ ಆಗಿದೆ. ದೊಡ್ಡ ಕವಲಂದೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿರ್ಮಲಾ ಅವರು ಕಾನೂನಿಗೆ ವಿರುದ್ಧವಾಗಿ ಮೃತಪಟ್ಟ ಗಟ್ಟವಾಡಿಪುರ ಗ್ರಾಮದ ಕೆಂಪಮ್ಮ ಎಂಬುವರ ಖಾತೆಗೆ 59,600 ಗಳನ್ನು ಜಮಾ ಮಾಡಿದ್ದಾರೆಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಮತ್ತು ಗಟ್ಟವಾಡಿ ಪುರ ಗ್ರಾಮದ ಮುಖಂಡ ರಾಜೇಶ್ ತಾಲ್ಲೂಕು ಪಿಡಿಒ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ವರದಿಯನ್ನು ಪ್ರಸಾರ ಮಾಡಲಾಗಿತ್ತು.

ಇದರಿಂದ ಎಚ್ಚೆತ್ತುಕೊಂಡ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ, ಜೆರಾಲ್ಡ್ ರಾಜೇಶ್ ಅವರು ವಿಶೇಷ ತಂಡವನ್ನು ರಚನೆ ಮಾಡಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ದಾಖಲಾತಿಗಳನ್ನು ಪರಿಶೀಲನೆ ಮಾಡಿ ವರದಿಯನ್ನು ತಿಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಅದರಂತೆ ದೊಡ್ಡ ಕವಲಂದೆ ಗ್ರಾಮ ಪಂಚಾಯಿತಿಗೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ನ್ಯೂಸ್ ಕರ್ನಾಟಕ ವರದಿಯ ಫಲಶೃತಿಯಾಗಿದೆ.

Ad
Ad
Nk Channel Final 21 09 2023
Ad