ಮೈಸೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಿದ ಹಿನ್ನಲೆ ಮೈಸೂರಿನ ಜಯದೇವಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಆಸ್ಪತ್ರೆಯಲ್ಲಿ ಬೆಳಿಗ್ಗೆಯಿಂದಲೇ ಜನ ಕ್ಯೂ ನಿಲ್ಲುತ್ತಿದ್ದಾರೆ.
ಸ್ಥಳೀಯ ಆಸ್ಪತ್ರೆಗೆ ಹೋಗುವ ಬದಲು ನೇರವಾಗಿ ಜಯದೇವಗೆ ಜನರು ಬರುತ್ತಿದ್ದಾರೆ. ಹೃದಯಾಘಾತಕ್ಕಿಂತ ಅದರ ಭಯದಲ್ಲೇ ಸಾರ್ವಜನಿಕರು ಆಸ್ಪತ್ರೆಗೆ ಬರುತ್ತಿದ್ದಾರೆ. ಪ್ರತಿನಿತ್ಯ ಹೊರಗಡೆ ಜಿಲ್ಲೆಗಳಿಂದ 400 ರಿಂದ 500 ಜನ ಜಯದೇವ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ.

