ಮೈಸೂರು : ಮೈಸೂರಿನಲ್ಲಿ ಹುಲಿ ಹಾವಳಿ ಹೆಚ್ಚಿದ್ದು, ಹುನಗನಹಳ್ಳಿಯಲ್ಲಿ ಹುಲಿ ಪ್ರತ್ಯಕ್ಷವಾಗಿದೆ. ಹುಲಿ ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ. ಗ್ರಾಮದ ಬಳಿ ಬಂಡೆಯ ಮೇಲೆ ಹುಲಿ ಕಾಣಿಸಿಕೊಂಡಿದೆ.
ಸರಗೂರು ತಾಲ್ಲೂಕಿನ ಹುನಗನಹಳ್ಳಿ ಗ್ರಾಮದಲ್ಲಿ ಮುಸ್ಸಂಜೆ ವೇಳೆ ಬಂಡೆ ಮೇಲೆ ಹುಲಿ ಕಾಣಿಸಿಕೊಂಡಿದೆ. ಅರಣ್ಯ ಇಲಾಖೆಗೆ ಸ್ಥಳೀಯರಿಂದ ಮಾಹಿತಿ ನೀಡಲಾಗಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದರು.

